Advertisement
ಹೊರಗಿನವರಿಗೆ ಟಿಕೆಟ್ ನೀಡಬಾರದು ಎಂದು ಕೆಲವರು ಆಗ್ರಹಿಸುತ್ತಿದ್ದರೂ, ಶೆಟ್ಟರ್ ಅವರೇ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಶೆಟ್ಟರ್‌ಗೆ ಟಿಕೆಟ್ ನೀಡದಂತೆ ಕೆಲವರು ನಾಯಕರೊಬ್ಬರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶೆಟ್ಟರ್ ದಿಲ್ಲಿಗೆ ದೌಡಾಯಿಸಿದ್ದಾರೆ.
ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರು ಮುಂಚೂಣಿ ಯಲ್ಲಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹುಬ್ಬಳ್ಳಿಯಲ್ಲಿ ಹೇಳಿದರು.