Advertisement

Belgavi: ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಇಬ್ಬರು ಮಕ್ಕಳು ಮೃತ್ಯು

10:03 PM Mar 10, 2024 | Team Udayavani |

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಭಾನುವಾರ ಘಟನೆ.

Advertisement

ಕಲ್ಲಪ್ಪ ಬಸಪ್ಪ ಗಾಣಿಗೇರ (36) ಮಕ್ಕಳಾದ ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು.

ರವೀಂದ್ರ ಮೇತ್ರಿಯವರ ಜಮೀನದಲ್ಲಿ ಇರುವ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದಾಗ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next