Advertisement

ಭಕ್ತರ ಸೋಗಿನಲ್ಲಿ ತೆರಳಿ ಕಳವು

09:50 AM Oct 22, 2021 | Team Udayavani |

ಬೆಂಗಳೂರು: ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ ಯಲ್ಲಿ ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಮಹಿಳೆ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಜೈನ ಮಂದಿರಕ್ಕೆ ಭಕ್ತರ ಸೋಗಿನಲ್ಲಿ ಭೇಟಿ ನೀಡಿ ಬೆಳ್ಳಿಯ ಪೂಜೆ ವಸ್ತುಗಳನ್ನು ಕಳವು ಮಾಡಿ ಪರಾರಿ ಯಾಗಿದ್ದ ಮಹಿಳೆಯನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಶಾಮಣ್ಣ ಗಾರ್ಡನ್‌ ನಿವಾಸಿ ಮುನ್ನಿ ಬಾನು (52) ಬಂಧಿತೆ. ಆಕೆಯಿಂದ 20 ಸಾವಿರ ರೂ. ಮೌಲ್ಯದ 379 ಗ್ರಾಂ ಬೆಳ್ಳಿ ಪೂಜಾ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ ಈ ಹಿಂದೆ ಮೂರು ಜೈನ್‌ ಮಂದಿರದಲ್ಲೂ ಕಳವು ಮಾಡಿರುವುದಾಗಿ ಆರೋಪಿ ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸರು ಹೇಳಿದರು.

ಮುನ್ನಿಬಾನು ಮೂಲ ಜೈನ ಧರ್ಮದವರಾಗಿದ್ದು, ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾದ ಬಳಿಕ ಮುಸ್ಲಿಂ ಧರ್ಮಕ್ಕೆ ಮತಾಂತ ರವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಮಗಳಿಗೆ ಮದುವೆ ಮಾಡಲಾಗಿದೆ. ಪತಿ, ಪುತ್ರನ ಜತೆ ಶಾಮಣ್ಣ ಗಾರ್ಡನ್‌ನಲ್ಲಿ ವಾಸವಾಗಿದ್ದಾರೆ.

ಮುನ್ನಿ ಬಾನುಗೆ ಜೈನ ಧರ್ಮ ಸಂಪ್ರದಾಯ ಗೊತ್ತಿದ್ದ ಕಾರಣ ಜೈನ ಮಂದಿರಗಳನ್ನೇ ಟಾರ್ಗೆಟ್‌ ಮಾಡಿ ಕಳ್ಳತನ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದರು. ಅ.16ರಂದು ಮಾಗಡಿ ರಸ್ತೆ ಜೈನ ಮಂದಿರದಲ್ಲಿ ದುರ್ಗಾಷ್ಟಮಿ ಪ್ರಯುಕ್ತ ಬೆಳ್ಳಿಯ ಪೂಜಾ ಸಾಮಗ್ರಿಯನ್ನು ಇಡಲಾಗಿತ್ತು. ಈ ವೇಳೆ ಭಕ್ತರ ಸೋಗಿನಲ್ಲಿ ಮಂದಿರ ಪ್ರವೇಶಿಸಿದ ಮುನ್ನಿ ಬಾನು, ಯಾರಿಗೂ ತಿಳಿಯದಂತೆ ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿ ಪರಾರಿಯಾಗಿದ್ದಳು.

Advertisement

ಈ ಬಗ್ಗೆ ಇಂದಿರ ಚಂದ್‌ ಎಂಬುವರು ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಇನ್ಸ್‌ಪೆಕ್ಟರ್‌ ಎಂ.ಸದಾನಂದ ನೇತೃತ್ವದ ತಂಡ ಮಂದಿರದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆಕೆ ಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ;- ಜೈ ಜವಾನ್‌-ಜೈ ಕಿಸಾನ್‌, ಜೈ ಪೊಲೀಸ್‌

 ಬೈಕ್‌ ಕಳ್ಳನ ಬಂಧನ: ಮತ್ತೂಂದು ಪ್ರಕರಣದಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ ದ್ದಾರೆ. ಅನ್ನಪೂರ್ಣೇಶ್ವರಿನಗರ ನಿವಾಸಿ ದೀಪಕ್‌ ಕುಮಾರ್‌ (36) ಬಂಧಿತ. ಆರೋಪಿಯಿಂದ ಐದು ಲಕ್ಷ ರೂ. ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಬಂಧನದಿಂದ ಅನ್ನಪೂಣೇಶ್ವರಿನಗರ, ಹನುಮಂತನಗರ, ಶಿವಾಜಿನಗರ, ಬ್ಯಾಡರಹಳ್ಳಿ, ಮಹಾಲಕ್ಷ್ಮೀ ಲೇಔಟ್‌, ಬಾಗಲಗುಂಟೆ ಹಾಗೂ ಕುಣಿಗಲ್‌ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದರು.

ಅ.13ರ.ದು ರಾತ್ರಿ 10 ಗಂಟೆ ವೇಳೆಯಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿ ಪರಾರಿಯಾಗಿದ್ದ. ಈ ಬಗ್ಗೆ ಬೈಕ್‌ ಮಾಲೀಕರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ದೀಪಕ್‌ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next