Advertisement
ಬೆಳ್ಳಂದೂರು ಕೆರೆಯ ಸಂರಕ್ಷಣೆಗೆ ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ಎನ್‌ಜಿಟಿ ಆದೇಶ ಹೊರಡಿಸಿ ವರ್ಷ ಕಳೆದರೂ ಸಮರ್ಪಕವಾಗಿ ಯಾವುದೇ ಪರಿಹಾರ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ. ಕೆರೆಯಲ್ಲಿನ ಕೆಲ ಭಾಗಗಳಲ್ಲಿ ಜೋಂಡು ತೆರವುಗೊಳಿಸಿದ್ದೇ ಸ್ಥಳೀಯ ಸಂಸ್ಥೆಗಳ ಸಾಧನೆಯಾಗಿದ್ದು, ಉಳಿದಂತೆ ಯಾವುದೇ ರೀತಿಯ ಪರಿಣಾಮಕಾರಿ ಕ್ರಮಗಳನ್ನು ಈವರೆಗೆ ಕೈಗೊಂಡಿಲ್ಲ.
Related Articles
Advertisement
ಅವೈಜ್ಞಾನಿಕ ಜೋಂಡು ವಿಲೇವಾರಿ: ಬಿಡಿಎ ವತಿಯಿಂದ ಕೆರೆಯಲ್ಲಿನ ಸಾವಿರಾರು ಟನ್ ಜೋಂಡು ತೆರವುಗೊಳಿಸಲಾಗಿದೆ. ಆದರೆ, ತೆರವುಗೊಳಿಸಿ ಜೋಂಡನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಬಿಡಿಎ ಮುಂದಾಗಿಲ್ಲ. ಬದಲಾಗಿ ಒಂದು ಸ್ಥಳದಲ್ಲಿ ರಾಶಿ ಹಾಕಿರುವುದರಿಂದ ಮತ್ತೆ ಸಾಂಕ್ರಾಮಿಕ ರೋಗಗಳು ಹರಡುವಂತಹ ಆತಂಕವೂ ಶುರುವಾಗಿತ್ತು.
ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆಬೆಳ್ಳಂದೂರು ಕೆರೆ ಅಭಿವೃದ್ಧಿ ವಿಚಾರದಲ್ಲಿ ಎನ್‌ಜಿಟಿ ಬಿಬಿಎಂಪಿಗೆ ಹೆಚ್ಚಿನ ಜವಾಬ್ದಾರಿ ನೀಡಿರಲಿಲ್ಲ. ಕೇವಲ ಬೆಳ್ಳಂದೂರು ಕೆರೆಯಲ್ಲಿ ತ್ಯಾಜ್ಯ ವಿಲೇವಾರಿಯಾಗದಂತೆ ಎಚ್ಚರ ವಹಿಸುವಂತೆ ತಿಳಿಸಿತ್ತು. ಅದರಂತೆ ಬಿಬಿಎಂಪಿ ವತಿಯಿಂದ ಮೂರು ಪಾಳಿಗಳಲ್ಲಿ ಮಾರ್ಷಲ್‌ಗಳು
ಕಾರ್ಯ ನಿರ್ವಹಿಸುತ್ತಿದ್ದು, ಕಳೆದೊಂದು ವರ್ಷದಲ್ಲಿ ಯಾವುದೇ ರೀತಿಯ ತ್ಯಾಜ್ಯ ವಿಲೇವಾರಿ ಪ್ರಕರಣ ವರದಿಯಾಗಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದರು. ಪಾಲಿಕೆಗೆ ನೀಡಲಾದ ಜವಾಬ್ದಾರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಲಾಗಿದ್ದರೂ, ಪಾಲಿಕೆಗೆ 25 ಕೋಟಿ ರೂ. ದಂಡ ವಿಧಿಸಿರುವುದು ಸರಿಯಲ್ಲ. ಎನ್‌ಜಿಟಿ ವಿಧಿಸಿರುವ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.