Advertisement

ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಲೋಕಾರ್ಪಣೆ

02:32 PM Mar 13, 2023 | Team Udayavani |

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮ ಮಾ.13ರಂದು ನಡೆಯಿತು.

Advertisement

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ನೂತನ ಪೊಲೀಸ್ ಠಾಣಾ ಕಟ್ಟಡ ಲೋಕಾರ್ಪಣೆ ಮಾಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಸುಳ್ಯ ಪ್ರಭಾರ ತಹಶೀಲ್ದಾರ್ ಜಿ.ಮಂಜುನಾಥ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್., ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ್ ಸ್ವಾಗತಿಸಿದರು. ಪೊಲೀಸ್ ಅಧಿಕಾರಿ ಭಾಸ್ಕರ್ ನಿರೂಪಿಸಿದರು. ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು, ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next