Advertisement

ಮಹರ್ಷಿ ಭಗೀರಥರ ಆದರ್ಶ ಪಾಲಿಸಿ

04:35 PM May 12, 2019 | Naveen |

ಬಳ್ಳಾರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗೀರಥ ಜಯಂತಿಯನ್ನು ಶನಿವಾರ ಸರಳವಾಗಿ ಆಚರಿಸಲಾಯಿತು.

Advertisement

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ವಿ.ರಾಮ್‌ ಪ್ರಸಾತ್‌ ಮನೋಹರ್‌ ಅವರು ಭಗೀರಥ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಪೂಜೆ ಸಲ್ಲಿಸಿ ಗೌರವ ಸೂಚಿಸಿದರು.

ಬಳಿಕ ಮಾತನಾಡಿದ ಅವರು, ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಗೀರಥ ಜಯಂತಿಯನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದರು.

ಮಹರ್ಷಿ ಭಗೀರಥ ಅವರ ಜೀವನವು ಭಕ್ತಿ, ಬದ್ಧತೆ, ಸಾಧನೆ ಮತ್ತು ಶ್ರದ್ಧೆಯಿಂದ ಕೂಡಿದ್ದು, ನಾವೆಲ್ಲರೂ ತಪ್ಪದೇ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹರ್ಷಿಯವರು ತೋರಿದ ಸಮಾಜಪರ ಕಾಳಜಿ, ಕಳಕಳಿ ಅನುಸರಿಸಬೇಕು ಎಂದ ಡಿಸಿ ರಾಮ್‌ ಪ್ರಸಾತ್‌ ಮನೋಹರ್‌, ಸತ್ಕಾರ್ಯಗಳಿಂದ ಜನರಿಗೆ ಒಳ್ಳೆಯದಾಗಬೇಕು. ಭೂಮಿಗೆ ಗಂಗೆಯನ್ನು ಕರೆತರುವಲ್ಲಿ ಕಠೊರ ತಪಸ್ಸು ಮಾಡಿದ ಭಗೀರಥರು ಸವಾಲು ಮತ್ತು ಸಮಸ್ಯೆಗಳಿಗೆ ಎಂದಿಗೂ ಎದೆಗುಂದಲಿಲ್ಲ. ಸಮಾಜಕ್ಕೆ ಒಳಿತು ಮಾಡಲು ಪರಮಾತ್ಮನನ್ನು ಒಲಿಸಿಕೊಂಡರು. ಭೂಮಿಯಲ್ಲಿನ ನೀರಿನ ಕೊರತೆಯನ್ನು ನೀಗಿಸಿದರು ಎಂದು ತಿಳಿಸಿದರು.

ಭಗೀರಥರು ತತ್ವ ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಯುವಸಮೂಹ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು ಎಂದವರು ಸಲಹೆ ನೀಡಿದರು.

Advertisement

ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್‌, ಭಗೀರಥ ಸಮಾಜದ ಮುಖಂಡರಾದ ಯರ್ರಿಸ್ವಾಮಿ, ದುರ್ಗೇಶ, ಶ್ರೀನಿವಾಸ್‌, ಸಂಗನಕಲ್ಲು ಕೃಷ್ಣಾ ಸೇರಿದಂತೆ ಸಮಾಜದ ಮುಖಂಡರು, ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next