ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಗುರುವಾರ ಧ್ವಜಾರೋಹಣ ನೆರವೇರಿಸಿದರು.
ಬಳಿಕ ತೆರೆದ ವಾಹನದಲ್ಲಿ ತೆರಳಿ ಗೌರವವಂದನೆ ಸ್ವೀಕರಿಸಿದರು. ನಂತರ ಪೊಲೀಸ್, ಗೃಹರಕ್ಷಕದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ನಡೆದ ಪಥಸಂಚನದಲ್ಲಿ ಧ್ವಜವಂದನೆ ಸ್ವೀಕರಿಸಿದರು.
ನಂತರ ಮಾತನಾಡಿದ ಡಿಸಿ ಎಸ್.ಎಸ್. ನಕುಲ್, ಸ್ವಾತಂತ್ರ್ಯ ಹೋರಾಟಕ್ಕೆ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರವಾಗಿದ್ದು, ರಾಷೀrಯ ಭಾವೈಕ್ಯತೆ ಸಂಕೇತವಾಗಿದೆ. ಕನ್ನಡ ಹಾಗೂ ತೆಲುಗು ಮಾತನಾಡುವ ಜನರು ಭಾಷಾ ಭೇದವನ್ನು ಮರೆತು ಹೋರಾಡಿದ್ದು, ಇಲ್ಲಿನ ಭಾಷಾ ಬಾಂಧವ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಟಿ. ಸುಬ್ರಮಣ್ಯಂ, ಟಿ.ಬಿ. ಕೇಶವರಾವ್, ಕೊಟ್ಟೂರಿನ ಗೋರ್ಲಿ ಶರಣಪ್ಪ, ಗೋರ್ಲಿ ರುದ್ರಮ್ಮ, ಡಾ| ಎ. ನಂಜಪ್ಪ, ಚಿದಾನಂದ ಶಾಸೀ÷, ಕೊ. ಚನ್ನಬಸಪ್ಪ, ಗೌಡಪ್ಪ, ಬಿಂಧು ಮಾದವರಾವ, ಬುರ್ಲಿ ಶೇಷಣ್ಣ, ಬೆಲ್ಲದ ಚೆನ್ನಪ್ಪ, ಬಲಸು ಸಾಂಬಮೂರ್ತಿ, ಹಡಪದ ತಿಮ್ಮಪ್ಪ , ಬಂಡಿಹಟ್ಟಿ ವೆಂಕೋಬರಾವ್, ಲಕ್ಷ್ಮೀದೇವಿ ಇನ್ನು ಮುಂತಾದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರನ್ನು ನಾವಿಂದು ಸ್ಮರಿಸಬೇಕಾಗಿದೆ ಎಂದರು.
ಸಾಧಕರಿಗೆ ಸನ್ಮಾನ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಟಿ. ಸುಪ್ರಿತ, ಬಿ.ಎಂ.ಅಪ್ರೀನ್, ಎಚ್.ಕೆ. ಕಾವ್ಯ ಅವರನ್ನು ಸನ್ಮಾನಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಂಪ್ಯೂಟರ್ ನೀಡಲಾಯಿತು. ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಕುಸುಮಾ ಉಜ್ಜಯಿನಿ, ಅನುಪಲ್ಲವಿ, ನಾಗರಾಜಗೌಡ ಪಾಟೀಲ್, ಕ್ರೀಡಾ ಕ್ಷೇತ್ರದಲ್ಲಿ ಉತ್ತೇಜ್, ಗೋಪಿ, ಯೋಜಿತ್, ಪ್ರಶಾಂತ್,. ಸೇವಾ ಕ್ಷೇತ್ರದಲ್ಲಿ ಗೃಹರಕ್ಷಕದಳದ ಎಸ್.ತಿಪ್ಪೇಸ್ವಾಮಿ, ಎಸ್.ಎಂ.ಗಿರೀಶ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸದರಾದ ವೈ. ದೇವಿಂದ್ರಪ್ಪ, ಸೈಯದ್ ನಾಸೀರ್ ಹುಸೇನ್, ಶಾಸಕರಾದ ಸೋಮಶೇಖರರೆಡ್ಡಿ, ಕೆ.ಸಿ. ಕೊಂಡಯ್ಯ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ, ಜಿಪಂ ಸಿಇಒ ಕೆ. ನಿತೀಶ್, ಎಸ್ಪಿ ಸಿ.ಕೆ. ಬಾಬಾ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.