Advertisement

ಜಿಂದಾಲ್ ಗೆ ಜಮೀನು ಪರಭಾರೆ ಬೇಡ

11:31 AM Jun 27, 2019 | Team Udayavani |

ಬಳ್ಳಾರಿ: ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡುವುದನ್ನು ವಿರೋಧಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

Advertisement

ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಮೇಲಾಗಿ ದೇಶದ ಅತಿದೊಡ್ಡ ಜಿಂದಾಲ್ ಕಂಪನಿಗೆ ಇಷ್ಟು ಕಡಿಮೆ 1.22 ಲಕ್ಷ ರೂ.ಗಳಿಗೆ ಎಕರೆ ಜಮೀನು ನೀಡುತ್ತಿರುವುದು ಸರ್ಕಾರದ ಬೊಕ್ಕಸಕ್ಕೆ ವಂಚನೆಯಾಗುತ್ತಿದೆ. ಆದ್ದರಿಂದ ಈ ಕೂಡಲೇ ರಾಜ್ಯ ಸರ್ಕಾರ ಜಮೀನನ್ನು ಹಿಂಪಡೆಯಬೇಕು.

ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಬೇಕು. ಇಲ್ಲವಾದರೆ ರಾಜ್ಯ ಪ್ರತಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವಿ. ರಾಮಾಂಜಿನೇಯ, ನಗರಾಧ್ಯಕ್ಷ ಬಿ. ಚಂದ್ರಶೇಖರ್‌, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಕೆ.ರಾಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಪಾರ್ವತಿ, ಜಿಲ್ಲಾ ಉಪಾಧ್ಯಕ್ಷ ಬಿ.ಆರ್‌.ಎಲ್. ಸೀನಾ,ಬಳ್ಳಾರಿ ತಾಲೂಕು ಅಧ್ಯಕ್ಷ ಕರುಣಾಕರರೆಡ್ಡಿ, ರೈತ ಸಂಘದ ಜಿಲ್ಲಾಧ್ಯಕ್ಷ ಹುಲಿಗೇಶ್‌, ನಗರ ಉಪಾಧ್ಯಕ್ಷ ಅಸುಂಡಿ ಸುರೇಶ್‌ ಸೇರಿದಂತೆ ವೇದಿಕೆ ಸದಸ್ಯರು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next