Advertisement

ಮತದಾನ ಬಹಿಷ್ಕಾರ ಹಿಂಪಡೆದ ಗ್ರಾಮಸ್ಥರು

03:54 PM Apr 22, 2019 | Naveen |

ಕಂಪ್ಲಿ: ತಾಲೂಕಿನ ಹಂಪಾದೇವನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕಜಾಯಿಗನೂರು ಗ್ರಾಮಕ್ಕೆ ಭಾನುವಾರ ಸಂಜೆ ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

Advertisement

ಚುನಾವಣೆಗಳು ಮುಗಿದ ನಂತರ ಗ್ರಾಮಸ್ಥರ ಬೇಡಿಕೆಯಂತೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿಗೆ ಸೂಕ್ತಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವಳಿ ಗ್ರಾಮಗಳ ಜನತೆ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಮತದಾನ ಮಾಡುವುದಾಗಿ ತಿಳಿಸಿ ಮತದಾನ ಬಹಿಷ್ಕಾರ ಹಿಂಪಡೆದರು.

ಮತದಾನ ಎನ್ನುವುದು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಅನೇಕ ಹೋರಾಟಗಳ ಮೂಲಕ ಮತದಾನದ ಹಕ್ಕನ್ನು ಪಡೆದಿದ್ದೇವೆ. ಆದರೆ, ಯಾವುದೇ ಕಾರಣಕ್ಕೆ ಮತದಾನದಿಂದ ಹೊರಗುಳಿಯಬಾರದು ಎಂದರು. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಚುನಾವಣೆ ಮುಗಿದ ಕೂಡಲೇ ರಸ್ತೆಗಳ ಅಭಿವೃದ್ದಿಗೆ ಸೂಕ್ತಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿಗಳ ಭರವಸೆಗೆ ಸ್ಪಂದಿಸಿದ ಅವಳಿ ಗ್ರಾಮಗಳ ಜನತೆ ಮತದಾನ ಬಹಿಷ್ಕಾರದಿಂದ ಹಿಂಪಡೆದು ಅಧಿಕ ಸಂಖ್ಯೆಯಲ್ಲಿ ಮತದಾನ ಮಾಡುವುದಾಗಿ ತಿಳಿಸಿದರು.

ತಹಶೀಲ್ದಾರ್‌ ಶ್ರೀಶೈಲ ವೈ. ತಳವಾರ, ಅಧಿಕಾರಿಗಳಾದ ಎಂ.ಸಿ.ಸಿ. ನೋಡಲ್ ಅಧಿಕಾರಿ ಚಿದಾನಂದ, ಉಪ ತಹಶೀಲ್ದಾರ್‌ ಬಿ. ರವೀಂದ್ರಕುಮಾರ್‌, ಎಸ್‌.ಎಸ್‌. ತಂಗಡಗಿ, ಪಿಎಸ್‌ಐ ಕೆ.ಬಿ. ವಾಸುಕುಮಾರ್‌, ಗ್ರಾಮ ಲೆಕ್ಕಾಧಿಕಾರಿ ಜಿಲಾನ್‌, ಗ್ರಾಮದ ಮುಖಂಡರಾದ ಜೆ. ಕಾಟಂರಾಜು, ಜಿ. ಮರೇಗೌಡ, ಅಬ್ರಗೌಡ, ಜಿ. ಅಮರೇಗೌಡ ಇತರರು ಇದ್ದರು.

Advertisement

22 ಜನರ ಗಡೀಪಾರು
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ತೊಡಗಿರುವ 22 ಜನರನ್ನು ಗಡಿಪಾರು ಮಾಡಲಾಗಿದ್ದು, ಇದರಲ್ಲಿ 18 ಜನ ಕಂಪ್ಲಿ ವ್ಯಾಪ್ತಿಯವರು ಸೇರಿದ್ದಾರೆ. •ಡಾ| ರಾಮ್‌ ಪ್ರಸಾತ್‌ ಮನೋಹರ್‌ ಜಿಲ್ಲಾಧಿಕಾರಿ.

Advertisement

Udayavani is now on Telegram. Click here to join our channel and stay updated with the latest news.

Next