Advertisement

ಪ್ರಧಾನಿ ನರೇಂದ್ರ ಮೋದಿ ಅದಾನಿ-ಅಂಬಾನಿ ಏಜೆಂಟ್

04:00 PM Apr 22, 2019 | Team Udayavani |

ಹಗರಿಬೊಮ್ಮನಹಳ್ಳಿ: ನರೇಂದ್ರ ಮೋದಿ ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್ ಮತ್ತು ಎಚ್ಎಎಲ್ ಪ್ರಗತಿಗೆ ಸ್ಪಂದಿಸದೆ ಕೇವಲ ಅದಾನಿ ಮತ್ತು ಅಂಬಾನಿಗಳ ಏಜೆಂಟರಂತೆ ಪ್ರಧಾನಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದರು.

Advertisement

ತಾಲೂಕಿನ ಕನ್ನಿಹಳ್ಳಿಯಲ್ಲಿ ಭಾನುವಾರ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಉಗ್ರಪ್ಪ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಒಟ್ಟು 18 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ. ಈಗಾಗಲೆ ರಾಜ್ಯದಲ್ಲಿ ಇಸ್ರೇಲ್ ಮಾದರಿ ತಂತ್ರಜ್ಞಾನದ ಅಳವಡಿಕೆಗೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಪ್ರಧಾನಿ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಕೇವಲ ರೈತರ ಕಣ್ಣೊರೆಸುವ ತಂತ್ರವಾಗಿದೆ. ಕೊನೆಯ ಅವಧಿಯಲ್ಲಿ ರೈತರು ನೆನೆಪಾದಂತಿದೆ ಎಂದರು.

ಸಮ್ಮಿಶ್ರ ಸರಕಾರವನ್ನು ಬೀಸ್‌ ಪರ್ಸೆಂಟ್ ಕಾ ಸರ್ಕಾರ್‌ ಎನ್ನುವ ಮೂಲಕ ಮೋದಿ ಪ್ರಧಾನಿ ಹುದ್ದೆ ಘನತೆಗೆ ಚ್ಯುತಿ ತಂದಿದ್ದಾರೆ. ರಫೆಲ್ ಹಗರಣದಲ್ಲಿ 3 ಸಾವಿರ ಕೋಟಿ ರೂ. ಪೈಕಿ ಪ್ರಧಾನಿ ಪಡೆದ ಪರ್ಸೆಂಟೇಜ್‌ ಎಷ್ಟು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.

ರಾಜ್ಯದಲ್ಲಿ ಮೋದಿ ಆಟ ನಡೆಯುವುದಿಲ್ಲ. ಈಗಾಗಲೇ ದೇಶದ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಮೋದಿಗೆ ತಕ್ಕ ಪಾಠ ಕಲಿಸಿದ್ದಾರೆ. ಶಾಸಕ ಭೀಮಾನಾಯ್ಕ ಕ್ಷೇತ್ರದ ಬೃಹತ್‌ ನೀರಾವರಿ ಯೋಜನೆಗಳಿಗೆ ಅನುದಾನ ಒದಗಿಸಿವುದರಿಂದ ಕ್ಷೇತ್ರದ ಮತದಾರರು ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿವುದು ನಿಶ್ಚಿತ ಎಂದು ತಿಳಿಸಿದರು.

Advertisement

ಶಾಸಕ ಭೀಮಾನಾಯ್ಕ ಮಾತನಾಡಿ, ಈ ಹಿಂದೆ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ರೈತರ ಸಾಲಮನ್ನಾ ಮಾಡಲಾಗಿತ್ತು. ಆದರೆ, ನರೇಂದ್ರ ಮೋದಿ ರೈತಪರ ಯೋಜನೆಗಳನ್ನು ಅನುಷ್ಠಾನಗೊಳಿಸದೆ, ಕೇವಲ ಭ್ರಮೆಯಲ್ಲೆ ಜನರನ್ನು ತೇಲಾಡಿಸುವ ಯತ್ನ ನಡೆಸುತ್ತಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ನ್ನು ಚುನಾವಣೆಗಾಗಿ ಬಳಸುತ್ತಿರುವುದು ದೇಶದ ದುರಂತದ ಸಂಗತಿಯಾಗಿದೆ ಎಂದರು.

ನರೇಂದ್ರ ಮೋದಿ ಜನಿಸುವ ಮುನ್ನವೇ ಇಂದಿರಾಗಾಂಧಿ ಪ್ರಧಾನಿಯಾಗಿದ್ದ ವೇಳೆ ಸರ್ಜಿಕಲ್ ಸ್ಟ್ರೆ ೖಕ್‌ ನಡೆಸಿದೆ. 90 ಸಾವಿರ ಪಾಕ್‌ ಸೈನಿಕರನ್ನು ಸೆರೆಹಿಡಿಲಾಗಿತ್ತು. ಆದರೆ, ಬಿಜೆಪಿಯವರಂತೆ ಎಂದು ದೇಶದ ಭದ್ರತೆ ವಿಷಯವನ್ನು ಚುನಾವಣೆಗಾಗಿ ಬಳಸಿಕೊಂಡಿಲ್ಲ. ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಕೈಗೊಂಡ ನೀರಾವರಿ ಯೋಜನೆಗಳಿಗೆ ಮತದಾರರ ಬೆಂಬಲವಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಿಂದ ಅಭ್ಯರ್ಥಿ ಉಗ್ರಪ್ಪ ಅವರಿಗೆ 40 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿರಾಜ್‌ಶೇಖ್‌ರವರು ಕ್ಷೇತ್ರದಲ್ಲಿ ಪ್ರಚಾರ ಮಾಡದಂತೆ ಹೈಕಮಾಂಡ್‌ ಆದೇಶಿಸಿದೆ. ಚುನಾವಣೆ ನಂತರ ಇವರ ವಿರುದ್ಧ ಕ್ರಮ ಜರುಗಿಸಲು ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌, ಕೆಪಿಸಿಸಿ ಎಸ್ಟಿ ಘಟಕದ ಉಪಾಧ್ಯಕ್ಷ ಪವಾಡಿ ಹನುಮಂತಪ್ಪ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬುಡ್ಡಿ ಬಸವರಾಜ, ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಸೋಮಲಿಂಗಪ್ಪ, ಮಾಜಿ ಅಧ್ಯಕ್ಷರಾದ ಹೆಗ್ಡಾಳ್‌ ರಾಮಣ್ಣ, ಮುಟುಗನಹಳ್ಳಿ ಕೊಟ್ರೇಶ, ಜೆಡಿಎಸ್‌ ತಾಲೂಕು ಅಧ್ಯಕ್ಷ ಬನ್ನಿಗೋಳ ವೆಂಕಣ್ಣ, ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಡಿಶ್‌ ಮಂಜುನಾಥ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯು. ಬಾಬುವಲಿ, ಸದಸ್ಯರಾದ ಅಲ್ಲಾಭಕ್ಷಿ, ಜೋಗಿ ಹನುಮಂತಪ್ಪ, ಮುಖಂಡರಾದ ರಹೇಮಾನ್‌, ಕನ್ನಿಹಳ್ಳಿ ಚಂದ್ರಶೇಖರ, ಬಾಲಕೃಷ್ಣಬಾಬು, ಕೆಜಿಎನ್‌ ದಾದು, ಉಪ್ಪಾರ ಬಾಲು, ಆಂಜನೇಯ ರೆಡ್ಡಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next