Advertisement

ಸ್ಟ್ರಾಂಗ್‌ರೂಂನಲ್ಲಿ ಮತಯಂತ್ರಗಳು ಭದ್ರ

04:43 PM Apr 25, 2019 | Team Udayavani |

ಬಳ್ಳಾರಿ: ಗಣಿನಾಡು ಬಳ್ಳಾರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯಕ್ಕೆ ಮತದಾರರು ಮತದ ಮುದ್ರೆ ಒತ್ತಿರುವ ಮತಯಂತ್ರಗಳನ್ನು ನಗರ ಹೊರವಲಯದ ರಾವ್‌ ಬಹದ್ದೂರ್‌ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದ್ದ ಸ್ಟ್ರಾಂಗ್‌ರೂಮ್‌ನಲ್ಲಿ ಇಟ್ಟು ಬುಧವಾರ ಭದ್ರ ಪಡಿಸಲಾಗಿದ್ದು, ಮೇ 23ರ ಫಲಿತಾಂಶಕ್ಕಾಗಿ ಒಂದು ತಿಂಗಳ ಕಾಲ ಕಾಯಬೇಕಾಗಿದೆ.

Advertisement

ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ್ದ ಮತಯಂತ್ರಗಳನ್ನು ತಲಾ ಒಂದೊಂದು ಸ್ಟ್ರಾಂಗ್‌ರೂಮ್‌ಗಳಲ್ಲಿ ಇಟ್ಟು, ರಾಜಕೀಯ ಪಕ್ಷಗಳ ಮುಖಂಡರು, ಜಿಲ್ಲಾ ಚುನಾವಣಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಸಮ್ಮುಖದಲ್ಲಿ ಸ್ಟ್ರಾಂಗ್‌ರೂಮ್‌ಗಳನ್ನು ಮುಚ್ಚಿ ಭದ್ರಪಡಿಸಲಾಯಿತು. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಚುನಾವಣಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌, ಎಸ್‌ಪಿ ಲಕ್ಷ್ಮ್ಮಣ ನಿಂಬರಗಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ನಂದಿನಿ ಪರಿಶೀಲನೆ ನಡೆಸಿದರು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ ಲಕ್ಷ್ಮಣ ನಿಂಬರಗಿ, 8 ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಇಲ್ಲಿನ ಆರ್‌ವೈಎಂಇಸಿ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದ್ದ ಸ್ಟ್ರಾಂಗ್‌ ರೂಮ್‌ನಲ್ಲಿ ಇರಿಸಿ ಭದ್ರಪಡಿಸಲಾಗಿದೆ. ಸ್ಟ್ರಾಂಗ್‌ ರೂಮ್‌ಗಳ ಬಳಿ ಸೇರಿ ಒಟ್ಟು 30 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜತೆಗೆ ಸ್ಟ್ರಾಂಗ್‌ರೂಮ್‌ಗಳಿಗೆ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮೂರು ಹಂತದ ಭದ್ರತೆಯನ್ನು ವ್ಯವಸ್ಥೆ ಮಾಡಲಾಗಿದೆ. 1ನೇ ಹಂತದಲ್ಲಿ ಸ್ಟ್ರಾಂಗ್‌ ರೂಮ್‌ಗಳ ಬಳಿ ಸಿಆರ್‌ಪಿಎಫ್‌ ಸಿಬ್ಬಂದಿಗಳು ಭದ್ರತೆ ನೀಡಲಿದ್ದಾರೆ. ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಡಿಎಆರ್‌ ಸಿಬ್ಬಂದಿಗಳು, ಮೂರನೇ ಹಂತದಲ್ಲಿ ಸಿವಿಲ್ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಪ್ರತಿ ಪಾಳಿಯಲ್ಲಿ 100 ಸಿಬ್ಬಂದಿಗಳು ಭದ್ರತೆ ಒದಗಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಐಜಿಪಿ ನಂಜುಂಡಸ್ವಾಮಿ ಪ್ರೊಬೇಷನರಿ ಐಎಎಸ್‌ ಅಧಿಕಾರಿ ನಂದಿನಿ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next