Advertisement

50 ಲಕ್ಷ ಸದಸ್ಯತ್ವ ನೋಂದಣಿ ಗುರಿ

11:06 AM Jul 07, 2019 | Team Udayavani |

ಬಳ್ಳಾರಿ: ಈ ಬಾರಿ 50 ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದ್ದು, ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

Advertisement

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಜುಲೈ 6ರಿಂದ ರಾಷ್ಟ್ರಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದೇ ರೀತಿ ರಾಜ್ಯದ 30 ಜಿಲ್ಲೆಗಳಲ್ಲೂ ಇಂದು ಏಕಕಾಲಕ್ಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅಭಿಯಾನವು ಜುಲೈ 6ರಿಂದ ಆಗಸ್ಟ್‌ 11ರವರೆಗೆ ನಡೆಯಲಿದ್ದು, 50ಲಕ್ಷ ಕ್ಕೂ ಹೆಚ್ಚು ಹೊಸ ಸದಸ್ಯರ ನೋಂದಣಿಯ ಗುರಿ ಹೊಂದಲಾಗಿದೆ. ಇದಕ್ಕಾಗಿ ವಿಸ್ತಾರಕರನ್ನು ನಿಯೋಜಿಸಲಾಗಿದ್ದು, ರಾಜ್ಯಾದ್ಯಂತ 15 ಸಾವಿರ ವಿಸ್ತಾರಕರು ಪ್ರವಾಸ ಮಾಡಲಿದ್ದಾರೆ. ಒಂದು ವಾರ ಪೂರ್ಣ ಪ್ರಮಾಣದಲ್ಲಿ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಸಕ್ರೀಯ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. 25 ಸದಸ್ಯರನ್ನು ಮಾಡುವವರು ಸಕ್ರೀಯ ಸದಸ್ಯರಾಗಲಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಸಂಸದ ವೈ. ದೇವೇಂದ್ರಪ್ಪ, ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಮಾಜಿ ಶಾಸಕ ಟಿ.ಎಚ್. ಸುರೇಶ್‌ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್, ಬಿಜೆಪಿ ಎಸ್ಸಿ ಮೋರ್ಚಾದ ನಾಯಕ ಎಚ್. ಹನುಮಂತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎರ್ರಂಗಳಿ ತಿಮ್ಮಾರೆಡ್ಡಿ, ಕೆ. ರಾಮಲಿಂಗಪ್ಪ, ಮುರಹರಗೌಡ, ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್‌.ಗುರುಲಿಂಗನಗೌಡ, ಮುಖಂಡರಾದ ಡಾ| ಮಹಿಪಾಲ್ ಸೇರಿದಂತೆ ಪಕ್ಷದ ವಿವಿಧ ಮುಖಂಡರು, ಕಾರ್ಯಕರ್ತರು ಇತರರಿದ್ದರು. ಇದಕ್ಕೂ ಮುನ್ನ ಈಶ್ವರಪ್ಪನವರು ಬಿಜೆಪಿ ಕಚೇರಿ ಆವರಣದಲ್ಲಿ ಸಸಿನೆಟ್ಟು ನೀರುಣಿಸಿದರು. ಬಳಿಕ ಕನಕದುರ್ಗಮ್ಮ ದೇವಸ್ಥಾನಕ್ಕೆ ಹೋಗಿ ದೇವಿಯ ದರುಶನ ಪಡೆದರು

Advertisement

Udayavani is now on Telegram. Click here to join our channel and stay updated with the latest news.

Next