Advertisement

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಮುಂದುವರಿಯಲಿ

05:32 PM May 31, 2019 | Naveen |

ಬಳ್ಳಾರಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಕೂಡಲೇ ಹಿಂಪಡೆದು, ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಕಾಂಗ್ರೆಸ್‌ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

Advertisement

ಲೋಕಸಭೆ ಚುನಾವಣೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ, ಇದು ಸರಿಯಾದ ಕ್ರಮವಲ್ಲ. ಕಾಂಗ್ರೆಸ್‌ ಪಕ್ಷ 134 ವರ್ಷಗಳ ಇತಿಹಾಸ ಹೊಂದಿದೆ. ದೇಶಕ್ಕೆ ಸ್ವತಂತ್ರ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್‌ ಶಾಸ್ತ್ರಿ, ಇಂದಿರಾ ಗಾಂಧಿ, ಪಿ.ವಿ. ನರಸಿಂಹರಾವ್‌, ಡಾ| ಮನಮೋಹನ್‌ ಸಿಂಗ್‌ ದೇಶದ ಪ್ರಧಾನಮಂತ್ರಿಗಳಾಗಿ ಉತ್ತಮ ಆಡಳಿತ ನೀಡಿದ್ದಾರೆ.

ಸೋನಿಯಾ ಗಾಂಧಿಯವರು ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ವೇಳೆ ಉತ್ತಮವಾಗಿ ಮುನ್ನಡೆಸಿದ್ದಾರೆ. ಇವರ ಅವಧಿಯಲ್ಲಿ 2004, 2009ರಲ್ಲಿ ನಡೆದ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿಯವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಕೂಡಲೇ ವಾಪಸ್‌ ಪಡೆದು, ತಾವೇ ಮುಂದುವರಿಯಬೇಕು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಎ.ಮಾನಯ್ಯ, ಯುವ ಮುಖಂಡರಾದ ಹನುಮಕಿಶೋರ್‌, ಪಿ.ಮೋಹನ್‌ಬಾಬು, ಕುಮಾರಮ್ಮ, ಎರಕುಲಸ್ವಾಮಿ, ಪ್ರವಲ್ಲಿಕಾ, ಲಕ್ಷ್ತ್ರಿದಾಸ್‌, ಕೊಳಗಲ್ಲು ಅಂಜಿನಿ, ಕುಮಾರ್‌, ಉದಯ್‌, ಸುರೇಶ್‌, ಚಾಂದ್‌ಬಾಷ, ಮಲ್ಲೇಶ್ವರಿ, ಶಂಕರ್‌, ದ್ರಾಕ್ಷಾಯಿಣಿ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next