Advertisement

ಸ್ವಚ್ಛತೆಯೊಂದಿಗೆ ನೀರು ಸಂರಕ್ಷಿಸಿ: ನಿತೀಶ್‌

04:59 PM Jun 12, 2019 | Team Udayavani |

ಬಳ್ಳಾರಿ: ಸುತ್ತಮುತ್ತಲ ಪರಿಸರ ಸ್ವಚ್ಛತೆಗೆ ಒತ್ತು ನೀಡುವುದು. ಸ್ವಚ್ಛತೆ ಕಾಪಾಡುವುದರ ಜತೆಗೆ ನೀರಿನ ಸಂರಕ್ಷಣೆಗೂ ಮೊದಲ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ಕೆ.ನಿತೀಶ್‌ ಹೇಳಿದರು.

Advertisement

ಪರಿಸರ ದಿನಾಚರಣೆ ನಿಮಿತ್ತ ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಎರ್ರಿಸ್ವಾಮಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛಮೇವ ಜಯತೆ ಮತ್ತು ಜಲಾಮೃತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರು ತಮ್ಮ ಹೊಲಗಳಲ್ಲಿ ನರೇಗಾ ಮತ್ತು ಜಲಾಮೃತ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ ಬದು ನಿರ್ಮಾಣ ಮಾಡುವ ಮೂಲಕ ಮಣ್ಣಿನ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯನ್ನು ಸರ್ಕಾರಿ ಅಧಿಕಾರಿಗಳಿಂದಲೇ ಮಾಡಲು ಸಾಧ್ಯವಿಲ್ಲ. ಸಮಾಜದ ಪ್ರತಿಯೊಬ್ಬರು ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವುದರ ಜತೆಗೆ ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿದಾಗ ಮಾತ್ರ ಸ್ವಚ್ಛತೆಗೆ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿದಂತಾಗುತ್ತದೆ ಎಂದರು. ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ಜಿಪಂ ಸದಸ್ಯ ಅಲ್ಲಂ ಪ್ರಶಾಂತ, ತಾಪಂ ಇಒ ಜಾನಕಿರಾಂ ಮಾತನಾಡಿದರು. ಚೆಳ್ಳಗುರ್ಕಿ ಗ್ರಾಪಂ ಅಧ್ಯಕ್ಷ ಎನ್‌.ಹನುಮಂತ, ಬಳ್ಳಾರಿ ತಾಪಂ ಅಧ್ಯಕ್ಷೆ ರಮೀಜಾ ಬಿ, ತಾಪಂ ಸದಸ್ಯ ಗೊವಿಂದಪ್ಪ, ಜಿಲ್ಲಾ ಅರಣ್ಯಾಧಿಕಾರಿ ಕಿರಣ, ಬಿಇಒ ವೆಂಕಟೇಶ ರಾಮಚಂದ್ರಪ್ಪ ಸೇರಿದಂತೆ ಹಲವರು ಇದ್ದರು. ಪ್ರೌಢ ಶಾಲಾ ಶಿಕ್ಷಕಿ ಯು.ಸುನಿತಾ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next