Advertisement

ಬಾಲಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನಾಗಿಸಿ

11:37 AM Jun 14, 2019 | Naveen |

ಬಳ್ಳಾರಿ: 2025ರೊಳಗಾಗಿ ಬಾಲ ಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನು ಮಾಡಲು ಸಾರ್ವಜನಿಕರು, ಪೋಷಕರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಬಿ.ಸಿ ಬಿರಾದಾರ ಹೇಳಿದರು.

Advertisement

ನಗರದ ಬಂಡಿಹಟ್ಟಿಯ ರಮಾಲದೇವಿ ದೇವಸ್ಥಾನ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ, ಜಿಲ್ಲಾ ವಕೀಲರ ಸಂಘ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ, ಮಕ್ಕಳ ಸಹಾಯವಾಣಿ 1098 ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ಕಾರ್ಮಿಕ ಪದ್ಧತಿಗೆ ತಳ್ಳಿದರೆ ಅವರಿಗೆ ಹಾಗೂ ದೇಶದ ಭವಿಷ್ಯ ಅತಂತ್ರದ ಸ್ಥಿತಿ ಎದುರಿಸಬೇಕಾಗುತ್ತದೆ. ಶಿಕ್ಷಕರು, ಪಾಲಕರು, ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಗೆ ಹೋಗದಂತೆ ತಡೆದು, ಗುಣಮಟ್ಟದ ಶಿಕ್ಷಣ ನೀಡಬೇಕು. ಸಂವಿಧಾನದ ಆಶಯಗಳೊಂದಿಗೆ ಭವ್ಯ ಭಾರತ ಪ್ರಜೆಯಾಗಿ ಹೊರಹೊಮ್ಮುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರಸ್ತುತ ಭಾರತದ ಜನಸಂಖ್ಯೆ ಆಧಾರದಲ್ಲಿ ಶೇ.37ರಷ್ಟು ಮಕ್ಕಳಿದ್ದಾರೆ. ಅವರಿಗೆ ಶಿಕ್ಷಣ ಕೊಡಿಸಿ ಜವಾಬ್ದಾರಿ ಹೆಚ್ಚಿಸಿ ಭಾರತದ ನಿರ್ಮಾಣದಲ್ಲಿ ಭಾಗಿಯಾಗಬೇಕು. ಇದರಿಂದ ದೇಶದಲ್ಲಿ ನಿರ್ಮಾಣವಾಗಿರುವ ಬಾಲ ಕಾರ್ಮಿಕ ಪದ್ಧತಿ ದೂರವಾಗಿಸಲು ಪಣ ತೊಡಬೇಕು. ಕೇಂದ್ರ ಸರ್ಕಾರ ಅನೇಕ ಕಾನೂನು ಜಾರಿಗೆ ತಂದಿದೆ. ಅಧಿಕಾರಿಗಳು ಈ ಕಾನೂನಿನ ಮೂಲಕ ಜಾಗೃತಿ ಮೂಡಿಸಿ ಶಾಲೆಗೆ ಸೇರಿಸುವ ಅವಶ್ಯಕತೆಯಿದೆ. ಪ್ರತಿಯೊಂದು ಮಗು ಶಿಕ್ಷಣ ಪಡೆದು ದೇಶದ ಆರ್ಥಿಕತೆಗೆ ಮುನ್ನುಡಿ ಬರೆಯಬೇಕು. ಇದರಿಂದ ಭಾರತವು 20 ವರ್ಷಗಳಲ್ಲಿ ವಿಶ್ವದ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಎಸ್‌. ಮಲ್ಲೂರ್‌ ಚಾಲನೆ ನೀಡಿದರು.

Advertisement

ಕಾರ್ಯಕ್ರಮದ ಅಂಗವಾಗಿ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆಯ ಕುರಿತು ಅಧ್ಯಕ್ಷರು, ಅಧಿಕಾರಿ, ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ್‌ ಐಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್.ಸಿ. ರಾಘವೇಂದ್ರ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಮೈದೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ ಕುಮಾರ್‌ ಕೆ.ಎಚ್, ವೈದ್ಯಾಧಿಕಾರಿ ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್‌.ವಿ.ಅಂಕಲಯ್ಯ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್‌ ದಾಸಪ್ಪನವರ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ದುರ್ಗಪ್ಪ ಮಾಚನೂರ, ಎಸ್‌.ಭೋಜರಾಜ್‌, ಕೃಷ್ಣನಾಯ್ಕ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next