Advertisement

25ಲಕ್ಷ ಸಸಿ ನೆಡುವ ಗುರಿ: ಬಿರಾದಾರ

03:58 PM Jun 06, 2019 | Team Udayavani |

ಬಳ್ಳಾರಿ: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 25 ಲಕ್ಷ ಸಸಿ ನೆಡುವ ಯೋಜನೆ ಹಾಕಿಕೊಳ್ಳಲಾಗಿದ್ದು, ಅದನ್ನು ಎಲ್ಲ ಇಲಾಖೆಗಳ ಸಹಯೋಗದಲ್ಲಿ ಸಮರ್ಪಕವಾಗಿ ನಿಭಾಯಿಸಲಾಗುವುದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ.ಸಿ.ಬಿರಾದಾರ ಹೇಳಿದರು.

Advertisement

ನಗರದ ನೂತನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಬುಧವಾರ ಏರ್ಪಡಿಸಲಾಗಿದ್ದ ಕಾನೂನು ಅರಿವು, ನೆರವು ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ಲಾಸ್ಟಿಕ್‌ ಬಳಕೆ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಬದಲಿಗೆ ಪರ್ಯಾಯ ಉಪಯೋಗಿಸುವುದಕ್ಕೆ ಅನ್ವೇಷಣೆ ಮಾಡಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಪಠ್ಯವನ್ನು ಶಾಲೆಗಳಲ್ಲಿ ಅಳವಡಿಸಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶಕುಮಾರ್‌ ಮಾತನಾಡಿ, ಪರಿಸರ ದಿನಾಚರಣೆ ಇತ್ತೀಚಿನ ದಿನಗಳಲ್ಲಿ ಜಗತ್ತಿನಾದ್ಯಂತ ಅತ್ಯಂತ ವಿಶೇಷ ಆದ್ಯತಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ಧ್ಯೇಯ ವಾಯುಮಾಲಿನ್ಯ ಹಿಮ್ಮೆಟ್ಟಿಸೋಣ ಎಂಬುದಾಗಿದೆ. ಕೈಗಾರಿಕರಣ, ಅರಣ್ಯ ನಾಶ, ಕೃಷಿ ತ್ಯಾಜ್ಯ ಸೇರಿದಂತೆ ನಾನಾ ಕಾರಣಗಳಿಂದ ವಾಯುಮಾಲಿನ್ಯ ಉಂಟಾಗುತ್ತಿದ್ದು, 50 ರಿಂದ 70 ಲಕ್ಷ ಜನರು ಈ ವಾಯು ಮಾಲಿನ್ಯದಿಂದ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ನಾವೆಲ್ಲರೂ ಸೇರಿ ಸಮತೋಲಿತ ಪರಿಸರ ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧಿಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಮಲ್ಲೂರು ಮಾತನಾಡಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಸಿ.ಶಿವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಮತೋಲಿತ ಪರಿಸರ ಕಾಪಾಡುವ ನಿಟ್ಟಿನಲ್ಲಿ ಹೆಚ್ಚೆಚ್ಚು ಗಿಡಮರಗಳನ್ನು ನೆಡಬೇಕು ಎಂದರು.

Advertisement

ಪ್ಲಾಸ್ಟಿಕ್‌ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕಳೆದ ವರ್ಷ 12 ಪ್ರಕರಣ ದಾಖಲಿಸಿದ್ದೇವೆ ಎಂದ ಅವರು, ಕೊಟ್ಟೂರಿನ ಗಚ್ಚಿನಮಠದ ಶಾಲೆ ಈ ವರ್ಷದ ರಾಜ್ಯಮಟ್ಟದ ಪರಿಸರ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್‌.ಕಿರಣಕುಮಾರ್‌, ನ್ಯಾಯಾಧೀಶರಾದ ವಿಪುಲಾ ಎಂ. ಪೂಜಾರಿ, ಭವಾನಿ, ಸುಜಾತಾ, ವಕೀಲರ ಸಂಘದ ಕಾರ್ಯದರ್ಶಿ ಎಸ್‌.ವಿ.ಅರಸೂರು ಸೇರಿದಂತೆ ನ್ಯಾಯಾಧೀಶರು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next