Advertisement

ಶಾಲಾ-ಕಾಲೇಜು ಶುಲ್ಕ ಸರ್ಕಾರವೇ ಭರಿಸಲಿ

04:59 PM May 27, 2020 | Naveen |

ಬಳ್ಳಾರಿ: ವಿದ್ಯಾರ್ಥಿಗಳ ಶಾಲಾ, ಕಾಲೇಜು ಶುಲ್ಕವನ್ನು ಸರ್ಕಾರವೇ ಭರಿಸಬೇಕು. ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಪರೀಕ್ಷಾ ರೂಪುರೇಷೆಗಳನ್ನು ಸಿದ್ಧಪಡಿಸಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಲಾಯಿತು.

Advertisement

ಎಲ್ಲ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ವಿವಿ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕು. ಈಗಾಗಲೇ ಪಡೆದಿದ್ದ ಶುಲ್ಕವನ್ನು ವಾಪಸ್‌ ನೀಡಬೇಕು. ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್‌ ಪಾಸ್‌ಗಳನ್ನು ನೀಡಬೇಕು. ಎಲ್ಲ ವಿದ್ಯಾರ್ಥಿಗಳ ಶಿಷ್ಯ ವೇತನಗಳನ್ನು (ಸ್ಕಾಲರ್ಶಿಪ್‌) ಹೆಚ್ಚಿಸಬೇಕು. ಆನ್‌ಲೈನ್‌ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸಬಾರದು.ಕ್ವಾರಂಟೈನ್‌ ಕೇಂದ್ರಗಳಾಗಿ ಬಳಸಿದ್ದ ಶಾಲೆ, ಕಾಲೇಜು, ಹಾಸ್ಟೆಲ್‌ ಕಟ್ಟಡಗಳನ್ನು ಸಂಪೂರ್ಣವಾಗಿ ಶುದ್ಧೀಕರಿಸಿ ಸ್ಯಾನಿಟೈಸ್‌ ಮಾಡಿದ ನಂತರವೇ ವಿದ್ಯಾರ್ಥಿಗಳಿಗೆ ಅದನ್ನು ತೆರೆಯಬೇಕು. ವಿದ್ಯಾರ್ಥಿಗಳಿಗೂ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಅವರು ಆಗ್ರಹಿಸಿದ್ದಾರೆ. ಈ ವೇಳೆ ಜಿಲ್ಲಾ ಕಾರ್ಯದರ್ಶಿ ಜೆ.ಪಿ. ರವಿಕಿರಣ್‌ ಸೇರಿ ಇತರರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next