Advertisement
ಬಂದ್ ಗೆ ಅಖಂಡ ಬಳ್ಳಾರಿ ಜಿಲ್ಲಾ ಸಮಿತಿ ಕರೆ ನೀಡಿದ್ದು ,ನಗರದ ರಾಯಲ್ ವೃತ್ತದಲ್ಲಿ ಬೃಹತ್ ಹೋರಾಟ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು ಸೇರಿ 25ಕ್ಕೂ ಹೆಚ್ಚು ಸಂಘ ಸಂಸ್ಥೆಗಳು, ಸ್ವಾಮೀಜಿಗಳು, ಚೇಂಬರ್ ಆಫ್ ಕಾರ್ಮಸ್ ಬಂದ್‍ಗೆ ಬೆಂಬಲ ನೀಡಿವೆ. ಬೆಳಗ್ಗೆ 6 ಗಂಟೆಗೆ ರಸ್ತೆಗಿಳಿದ ಪ್ರತಿಭಟನಾ ನಿರತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗಡಿಗಿ ಚನ್ನಪ್ಪ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಬಗ್ಗೆ ಮೊದಲೇ ಜಾಗೃತಿ ಮೂಡಿಸಿದ್ದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ದೂರದೂರುಗಳಿಂದ ಬರುವ ಬಸ್ ಬೆಳಗಿನ ಜಾವವೇ ನಿಲ್ದಾಣ ಸೇರಿದ್ದವು. ಇನ್ನು ಚಿತ್ರಮಂದಿರ, ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟುಗಳೆಲ್ಲವೂ ಸ್ವಯಂ ಪ್ರೇರಣೆಯಿಂದ ಮುಚ್ಚಿದ್ದವು. ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Related Articles
Advertisement