Advertisement

ಬಳ್ಳಾರಿ ಬಂದ್‌: ಮಿಶ್ರ ಪ್ರತಿಕ್ರಿಯೆ

10:43 PM Oct 01, 2019 | Team Udayavani |

ಬಳ್ಳಾರಿ: ವಿಜಯನಗರ ಜಿಲ್ಲೆ ರಚನೆಗೆ ವಿರೋಧಿ ಸಿ ವಕೀಲರು, ಕನ್ನಡಪರ, ರೈತಪರ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಬಳ್ಳಾರಿ ಬಂದ್‌’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಬೆಳಗ್ಗೆಯಿಂದಲೇ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ನಗರದ ಬೆಂಗಳೂರು ರಸ್ತೆ ಬಿಕೋ ಎನ್ನುತ್ತಿತ್ತು. ಚಿತ್ರಮಂದಿರ, ಪೆಟ್ರೋಲ್‌ ಬಂಕ್‌ಗಳಲ್ಲಿ ಬಂದ್‌ ಫಲಕಗಳನ್ನು ಅಳವಡಿಸಲಾಗಿತ್ತು. ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

Advertisement

ನಗರ ಸಾರಿಗೆ ಬಸ್‌ಗಳು ರಸ್ತೆಗಿಳಿಯಲಿಲ್ಲ. ನಗರಕ್ಕೆ ಆಗಮಿಸುತ್ತಿದ್ದ ದೂರದೂರಿನ ಬಸ್‌ಗಳನ್ನು ಬೆಳಗಿನ ಜಾವವೇ ಪ್ರತಿಭಟನಾನಿರತರು ತಡೆದ ಹಿನ್ನೆಲೆಯಲ್ಲಿ ನಿಲ್ದಾಣಕ್ಕೆ ತೆರಳಿದವು. ಖಾಸಗಿ ಬಸ್‌ಗಳು ನಗರದ ಹೊರವಲಯದಲ್ಲೇ ಪ್ರಯಾಣಿಕರನ್ನು ಇಳಿಸಿ, ವಾಪಸ್‌ ತೆರಳಿದವು. ಇದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು, ಆಟೋಗಳು ಬೆಳಗ್ಗೆ 9 ಗಂಟೆ ನಂತರ ರಸ್ತೆಗಿಳಿದು ಎಂದಿನಂತೆ ಸಂಚರಿಸಿದವು.

Advertisement

Udayavani is now on Telegram. Click here to join our channel and stay updated with the latest news.

Next