Advertisement

Ballari; ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ:ಓರ್ವ ಸಾವು, ಓರ್ವ ಗಂಭೀರ

07:18 PM Jan 14, 2024 | Team Udayavani |

ಬಳ್ಳಾರಿ : ನಗರದ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿದ ಅವಘಡ ಭಾನುವಾರ ಸಂಭವಿಸಿದೆ.

Advertisement

ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಸಲೀಂ ಎನ್ನುವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು ,ಮತ್ತೊರ್ವನ ಸ್ಥಿತಿ ಚಿಂತಾಜನಕವಾಗಿದೆ. ಐವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಯ್ಲರ್ ಸ್ಟೋಟಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next