Advertisement

ಬಳ್ಳಾರಿ ಅಭ್ಯರ್ಥಿ: ಶಾಸಕರ ಅತೃಪ್ತಿ

06:00 AM Oct 14, 2018 | |

ಬೆಂಗಳೂರು: ಬಳ್ಳಾರಿ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಕುರಿತಂತೆ ರಾಜ್ಯ ನಾಯಕರ ನಡವಳಿಕೆಯ ಬಗ್ಗೆ ಬಳ್ಳಾರಿ ಶಾಸಕರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಎದುರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಅಭ್ಯರ್ಥಿ ಆಯ್ಕೆ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ನಡುವೆ ಪೈಪೋಟಿ ನಡೆದಿದ್ದು, ಇಬ್ಬರೂ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಹೀಗಾಗಿ, ಶಾಸಕರೊಂದಿಗೆ ಪ್ರತ್ಯೇಕವಾಗಿ ದೂರವಾಣಿಯಲ್ಲಿ ಮಾತನಾಡಿರುವ ವೇಣುಗೋಪಾಲ್‌ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ಅವರನ್ನು ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಹೈಕಮಾಂಡ್‌ ಜತೆ ಚರ್ಚಿಸಿ ಭಾನು ವಾರ ಸಂಜೆ ವೇಳೆಗೆ ಅಭ್ಯರ್ಥಿ ಅಂತಿಮಗೊಳಿ ಸಲಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಅಭ್ಯರ್ಥಿ ಆಯ್ಕೆ ಕುರಿತು ಸಿದ್ದರಾಮಯ್ಯ ಬಳ್ಳಾರಿ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್‌ ಪ್ರಸಾದ್‌ ಪರ ಕೆಲಸ
ಮಾಡುವಂತೆ ಎಲ್ಲ ಶಾಸಕರ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್‌ ನಾಗೇಂದ್ರ ಸಹೋದರನ ಹೊರತಾಗಿ ಬೇರೆಯವರಿಗೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಈ ಮಧ್ಯೆ, ಐದು ಉಪ ಚುನಾವಣೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್‌ ಹೈ ಕಮಾಂಡ್‌ ಸಿದ್ದರಾಮಯ್ಯಗೆ ವಹಿಸಿದೆ. ಬಳ್ಳಾರಿ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್‌, ಜಮಖಂಡಿ ಉಸ್ತುವಾರಿಯನ್ನು ಪರಮೇಶ್ವರ್‌, ಶಿವಮೊಗ್ಗ ಉಸ್ತುವಾರಿಯನ್ನು ದೇಶಪಾಂಡೆಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ಈಡಿಗ ಸಮುದಾಯದ ಮತ ಸೆಳೆಯಲು ಕಾರ್ಯತಂತ್ರ ರೂಪಿಸುವಂತೆ ಜಯಮಾಲಾ ಅವರಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next