Advertisement

Bellary City ಶಾಸಕ ನಾರಾ ಭರತ್ ರೆಡ್ಡಿ ಮನೆ ಮೇಲೆ ಇ.ಡಿ ಅಧಿಕಾರಿಗಳ ದಾಳಿ

11:37 AM Feb 10, 2024 | Team Udayavani |

ಬಳ್ಳಾರಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮನೆ ಸೇರಿದಂತೆ ನಾಲ್ಕು ಕಡೆ ಇ.ಡಿ ‌(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Advertisement

ಶಾಸಕ ನಾರಾ ಭರತ ರೆಡ್ಡಿ ಮನೆ, ತಂದೆಯ ಕಚೇರಿ, ಶಾಸಕರ ಚಿಕ್ಕಪ್ಪ ಪ್ರತಾಪರೆಡ್ಡಿ ಮನೆ ಮತ್ತು ಕಚೇರಿಯ ಮನೆ ಮೇಲೆ ದಾಳಿ ನಡೆಸಲಾಗಿದೆ. ಇಂದು ಬೆಳಿಗ್ಗೆ 6.30ರ ಸಮಯದಲ್ಲಿ ನಾಲ್ಕು ಕಡೆ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನಿಂದ ಹತ್ತಾರು ಅಧಿಕಾರಿಗಳು, ಸಿಬ್ಬಂದಿಗಳ ತಂಡ ಆಗಮಿಸಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರಿನ ಪಾಸಿಂಗ್ ಇರುವ ಎರಡು ಇನ್ನೊವಾ ವಾಹನಗಳಲ್ಲಿ ಆಗಮಿಸಿದ್ದಾರೆ.

ಈ ಹಿಂದೆ ಹುಟ್ಟು ಹಬ್ಬಕ್ಕೆ ಇಡೀ ಬಳ್ಳಾರಿ ನಗರದ ಮನೆ ಮನೆಗೆ ಕುಕ್ಕರ್ ನೀಡಿದ್ದ ಶಾಸಕ ಭರತ ರೆಡ್ಡಿ ಸುದ್ದಿಯಾಗಿದ್ದರು.

ಶಾಸಕ ಭರತ್ ರೆಡ್ಡಿಯವರ ಬೆಂಗಳೂರಿನ ಇಂದಿರಾನಗರದಲ್ಲಿರುವ ಮನೆ, ಆಪ್ತ ಸಹಾಯಕರಾದ ರತ್ನಬಾಬು, ಅನಿಲ್ ಕುಮಾರ್, ಸಂಬಂಧಿ ಸತೀಶ್ ರೆಡ್ಡಿ ಅವರ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಇಡಿ ದಾಳಿ ವೇಳೆ ಸಾಕಷ್ಟು ಪ್ರಮಾಣದಲ್ಲಿ ದಾಖಲೆ ಪತ್ರ, ಹಣ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next