Advertisement

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

02:26 PM Jul 26, 2024 | Team Udayavani |

ಬಳ್ಳಾರಿ: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಯೋಜನೆ ಘೋಷಣೆ ಮಾಡದ ಕೇಂದ್ರ ಸರ್ಕಾರದ ಕ್ರಮವನ್ನು, ಯಾರೊಬ್ಬರಿಗೂ ಶಿಕ್ಷೆಯಾಗದೆ ಕೇವಲ ಪ್ರಕರಣ ದಾಖಲಿಸಿ ಬೆದರಿಕೆ ತಂತ್ರ ಅನುಸರಿಸುತ್ತಿರುವ ಇಡಿ ಅಧಿಕಾರಿಗಳ ಕ್ರಮವನ್ನು ಖಂಡಿಸಿ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

Advertisement

ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದೆ ಎಂದು ಚೊಂಬು ಪ್ರದರ್ಶಿಸಿ ಅಸಮಾಧಾನ ವ್ಯಕ್ಯಪಡಿಸಿದರು.

ದೇಶದಲ್ಲಿ ಕಳೆದ 10 ವರ್ಷಗಳಿಂದ ಸುಮಾರು ಏಳು ಸಾವಿರ ಪ್ರಕರಣವನ್ನು ದಾಖಲಿಸಿರುವ ಇಡಿ ಅಧಿಕಾರಿಗಳು ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ. ಯಾವೊಂದು ಪ್ರಕರಣವೂ ತಾರ್ಕಿಕ ಅಂತ್ಯ ಕಂಡಿಲ್ಲ. ಕೇವಲ ಬೆದರಿಕೆ ತಂತ್ರವಾಗಿದೆ. ಇಡಿ ದಾಳಿಗೆ ಒಳಗಾದವರು ಬಿಜೆಪಿ ಸೇರಿದರೆ ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ ಎಂದು ಪ್ರತಿಭಟನಾಲಾರರು ವ್ಯಂಗ್ಯವಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಕೆಪಿಸಿಸಿ ವಕ್ತಾರ ವೆಂಕಟೇಶ್ ಹೆಗಡೆ ಸೇರಿ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next