Advertisement

ಮಕ್ಕಳನ್ನು ಅನಿಷ್ಟ ಪದ್ಧತಿಗೆ ದೂಡದಿರಿ

03:21 PM Feb 01, 2020 | Naveen |

ಬಳ್ಳಾರಿ: ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ನಮ್ಮ ದೇಶದಲ್ಲಿ ಇನ್ನೂ ಅನಿಷ್ಟ ಪದ್ಧತಿಗಳು ಕಳೆದಿಲ್ಲ. ಇಂಥ ಪದ್ಧತಿಗಳಿಗೆ ಮನೆ ಬಡತನ ಹಾಗೂ ಹಿರಿಯರ ಅನಕ್ಷರತೆಯೇ ಕಾರಣ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಅರ್ಜುನ್‌ ಎಸ್‌. ಮಲ್ಲೂರ್‌ ಹೇಳಿದರು.

Advertisement

ನಗರದ ಬಿಡಿಎ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೀಡ್ಸ್‌ ಸಂಸ್ಥೆ, ಕಾರ್ಡ್‌-ಜ್ಞಾನ ಜ್ಯೋತಿ ಕಾಲೇಜು, ಸ್ನೇಹ0 ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿ ತಡೆಗಟ್ಟುವಲ್ಲಿನ ಸವಾಲುಗಳ ಕುರಿತು ರಾಜ್ಯಮಟ್ಟದ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರ ಪ್ರಕಾರ 18 ವರ್ಷಕ್ಕಿಂತ ಮುಂಚೆ
ಹುಡುಗಿಯರು ಮತ್ತು 21 ವರ್ಷಕ್ಕಿಂತ ಮುಂಚೆ ಹುಡುಗನ ಮದುವೆಯನ್ನು ಮಾಡುವುದು ಶಿಕ್ಷಾರ್ಹ ಅಪರಾಧ. ಗಂಡು ಮಕ್ಕಳಿಗೆ 21 ವರ್ಷ ಹೆಣ್ಣುಮಕ್ಕಳಿಗೆ 18 ವರ್ಷ ತುಂಬಿದ ನಂತರ ಮದುವೆ ಮಾಡುವುದರಿಂದ ಅವರಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿರುತ್ತಾರೆ ಹಾಗೂ ವೈಜ್ಞಾನಿಕವಾಗಿ ದೇಹದಲ್ಲಿ ಬದಲಾವಣೆ ಕಂಡುಬರುತ್ತದೆ
ಎಂದರು.

ರೀಡ್ಸ್‌ ಸಂಸ್ಥೆಯ ಕಾರ್ಯನಿರ್ವಾಹಕ ಸಿ. ತಿಪ್ಪೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ರೀಡ್ಸ್‌ ಮಂಡಳಿಯ ಸದಸ್ಯ ಗಣಪಾಲ್‌ ಹನುಮಂತ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ,
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಎಚ್‌.ಸಿ. ರಾಘವೇಂದ್ರ, ಡಿವೈಎಸ್‌ಪಿ ಮಹೇಶ್‌ಗೌಡ, ವಿಎಸ್‌ಕೆಯುನ ಸಿಂಡಿಕೇಟ್‌ ಸದಸ್ಯ ಮಲ್ಲಿಕಾರ್ಜುನ ಮರ್ಚೇಡ್‌ ಗೌಡ, ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ| ಸಂತೋಷಕುಮಾರ್‌, ಸಖೀ ಸಂಸ್ಥೆಯ ಡಾ| ಭಾಗ್ಯಲಕ್ಷ್ಮೀ , ಕನ್ನಡ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ| ಗೌರಿ ಮಾನಸ, ಶಿಕ್ಷಣ ಇಲಾಖೆಯ ಪತ್ರಹಿತ ವ್ಯವಸ್ಥಾಪಕರಾದ ಹಿರೇಮಠ, ವಿವಿಧ ಇಲಾಖೆಯ ಅ ಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಕಾರ್ಯಕ್ರಮಕ್ಕೂ ಮುನ್ನ ಹುತಾತ್ಮರ ದಿನಾಚರಣೆ ಅಂಗವಾಗಿ 2 ನಿಮಿಷಗಳ ಕಾಲ ಮೌನಾಚರಣೆ ಮಾಡುವುದರ ಮೂಲಕ ಮಹಾತ್ಮ ಗಾಂಧೀಜಿಯವರನ್ನು ಸ್ಮರಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next