Advertisement

ಕೋವಿಡ್ ತಡೆಗೆ ಮುಂಜಾಗ್ರತಾ ಕ್ರಮ

05:27 PM Jun 17, 2020 | Naveen |

ಬಳ್ಳಾರಿ: ಕೋವಿಡ್‌ ಗ್ರಾಮೀಣ ಪ್ರದೇಶದಲ್ಲಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿರುವ 6021 ಗ್ರಾಪಂಗಳಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

Advertisement

ನಗರದ ಮಿಂಚೇರಿ ಗ್ರಾಮದ ಬಳಿಕ ರಾಮನಕೊಳ ಹಳ್ಳ ಪುನಶ್ಚೇತನ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌ ಹರಡಿಲ್ಲ. ಗ್ರಾಪಂ ಪ್ರಮುಖರು, ಅಧಿಕಾರಿಗಳು ಇರುತ್ತಾರೆ. ಆರಂಭದಿಂದಲೂ ಗ್ರಾಮೀಣ ಭಾಗದಲ್ಲಿ ಕೋವಿಡ್‌ ಜಾಗೃತಿ ಮೂಡಿಸುತ್ತಿರುವುದರಿಂದ ರಾಜ್ಯದಲ್ಲಿ ಕೋವಿಡ್‌ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿಲ್ಲ ಎಂದರು.

ಜಿಂದಾಲ್‌ ಕೈಗಾರಿಕೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ವಿಶ್ವದಲ್ಲೇ ಸೋಂಕು ಹೆಚ್ಚಳವಾಗಿದೆ. ಸೋಂಕು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಶಕ್ತಿಮೀರಿ ಕ್ರಮ ಕೈಗೊಳ್ಳುತ್ತಿದೆ. ಜಿಂದಾಲ್‌ನಲ್ಲಿ ನೌಕರನೊಬ್ಬ ಮೃತಪಟ್ಟಿದ್ದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಜಿಂದಾಲ್‌ ಸಂಸ್ಥೆ ವಿರುದ್ಧ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ನಾಗೇಂದ್ರ, ಸಂಸದ ವೈ. ದೇವೇಂದ್ರಪ್ಪ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ತಾಪಂ ಅಧ್ಯಕ್ಷೆ ಎಸ್‌.ಆರ್‌.ಲೀಲಾವತಿ, ಜಿಪಂ ಸಿಇಒ ಕೆ. ನಿತೀಶ್‌, ಜಿಪಂ ಉಪಕಾರ್ಯದರ್ಶಿ ಅಮರೇಶ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ತಾಪಂ ಗ್ರಾಮೀಣ ಉದ್ಯೋಗ ಖಾತರಿ ಸಹಾಯಕ ನಿರ್ದೇಶಕ ಆರ್‌.ಕೆ. ಬಸವರಾಜ ಸೇರಿದಂತೆ ಜಿಪಂ ಅಧಿಕಾರಿಗಳು ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next