Advertisement

ಮತ್ತೆ 59 ಮಂದಿಗೆ ಸೋಂಕು: ಇಬ್ಬರ ಸಾವು

12:47 PM Jul 09, 2020 | Naveen |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 59 ಜನರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1447ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದು, ಮೃತ ಸಂಖ್ಯೆಯೂ 40ಕ್ಕೆ ಏರಿಕೆಯಾಗಿದ್ದು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

Advertisement

ಜಿಲ್ಲೆಯ 60 ವರ್ಷದ ಪಿ. 23393 ಮಹಿಳೆಯು ಜ್ವರ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಜುಲೈ 2ರಂದು ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಜುಲೈ 7ರಂದು ಮೃತಪಟ್ಟಿದ್ದಾರೆ. ಅದೇ ರೀತಿ 47 ವರ್ಷದ ಪಿ. 18512 ಪುರುಷ ಸಹ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು, ಜುಲೈ 3ರಂದು ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿ, ಜುಲೈ 7ರಂದು ಅಸುನೀಗಿದ್ದಾನೆ. ಮೃತರಿಬ್ಬರಿಗೂ ಸೋಂಕು ಹೇಗೆ ಹರಡಿತು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ.

ಈ ವರೆಗೆ 1447 ಜನರಿಗೆ ಸೋಂಕು ದೃಢಪಟ್ಟಿದ್ದು, ಬುಧವಾರ 30 ಜನರು ಬಿಡುಗಡೆಯಾದವರನ್ನು ಒಟ್ಟು 627 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ. 780 ಸಕ್ರಿಯ ಪ್ರಕರಣಗಳಾಗಿದ್ದು, 40 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಬುಲೆಟಿನ್‌ ಸ್ಪಷ್ಟಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next