Advertisement

ಮತ್ತೆ 41 ಜನರಿಗೆ ಕೋವಿಡ್‌-19 ದೃಢ

12:36 PM Jul 10, 2020 | Naveen |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪುನಃ 41 ಜನರಲ್ಲಿ ಕೋವಿಡ್‌-19 ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 1488ಕ್ಕೆ ಏರಿಕೆಯಾಗಿದೆ. ರೋಗ ಲಕ್ಷಣ ರಹಿತ 22 ಸೋಂಕಿತರನ್ನು ಮನೆಯಲ್ಲೇ ಐಸೋಲೇಷನ್‌ನಲ್ಲಿ ಇಡಲಾಗಿದೆ.

Advertisement

ಜಿಲ್ಲೆಯಲ್ಲಿ ಈ ವರೆಗೆ 1488 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗುರುವಾರ 39 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ಸೇರಿದ್ದು, ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 666ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 782ಕ್ಕೆ ಕುಸಿದಿದೆ. ಕೋವಿಡ್‌ ಸೋಂಕಿಗೆ ಈವರೆಗೆ 40 ಜನರು ಮೃತಪಟ್ಟಿದ್ದಾರೆ ಎಂದು ಡಿಸಿ ಎಸ್‌.ಎಸ್‌. ನಕುಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

22 ಹೋಮ್‌ ಐಸೋಲೇಷನ್‌: ಬಳ್ಳಾರಿಯಲ್ಲಿ ಕೋವಿಡ್‌ ಸೋಂಕಿತರ ಪ್ರಮಾಣ ದಿನೇದಿನೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಇದು ಇನ್ನು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಮೊದಲೇ ಜಿಲ್ಲಾಡಳಿತ ತಿಳಿಸಿದಂತೆ ಗುರುವಾರ ಪತ್ತೆಯಾದ ರೋಗಲಕ್ಷಣರಹಿತ 22 ಕೋವಿಡ್‌ ಸೋಂಕಿತರನ್ನು ಅವರವರ ಮನೆಯಲ್ಲಿ ಹೋಮ್‌ ಐಸೋಲೇಷನ್‌ನಲ್ಲಿ ಇಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next