Advertisement

ಗಣಿನಾಡಿನಲ್ಲಿ ಮತ್ತೆ ನಾಲ್ವರಿಗೆ ಕೋವಿಡ್

01:02 PM Jun 08, 2020 | Naveen |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಶನಿವಾರವಷ್ಟೇ 6 ಜನರಲ್ಲಿ ಪತ್ತೆಯಾಗಿದ್ದ ಕೋವಿಡ್‌-19 ಸೋಂಕು ಭಾನುವಾರ ಮತ್ತೆ ನಾಲ್ವರಲ್ಲಿ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

Advertisement

ತೋರಣಗಲ್ಲ್ ನ ಜಿಂದಾಲ್‌ ಸಂಸ್ಥೆಯ ನೌಕರ ಈಚೆಗೆ ನೆರೆಯ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಿಂದ ಬಂದಿದ್ದು, ಇವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 48 ಮತ್ತು 38 ವರ್ಷದ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಆವರಿಸಿರುವುದು ದೃಢಪಟ್ಟಿದೆ. ಈ ಇಬ್ಬರೂ ಜಿಂದಾಲ್‌ನ ಒಪಿಜೆ ಸೆಂಟರ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇದ್ದರು. ಇನ್ನು ಮಹಾರಾಷ್ಟ್ರದ ಮುಂಬೈನಿಂದ ವಾಪಸ್ಸಾಗಿದ್ದ 54 ವರ್ಷದ ಮಹಿಳೆ ಮತ್ತು ನೆರೆಯ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯಿಂದ ವಾಪಸ್ಸಾಗಿದ್ದ 54 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರೆಲ್ಲರೂ ಕ್ವಾರಂಟೈನ್‌ನಲ್ಲಿ ಇರುವುದು ಕೊಂಚಮಟ್ಟಿಗೆ ಸಮಾಧಾನ ಮೂಡಿಸಿದೆ.

ಸೋಂಕಿತರೆಲ್ಲರನ್ನೂ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಸ್ಪಷ್ಟಪಡಿಸಿದ್ದಾರೆ. ಭಾನುವಾರ ಪತ್ತೆಯಾದ ನಾಲ್ಕು ಪ್ರಕರಣಗಳನ್ನು ಸೇರಿ ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದ್ದು, ಈ ಪೈಕಿ 43 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ. ಓರ್ವ ಸಾವಿಗೀಡಾಗಿದ್ದಾನೆ. ಉಳಿದ 20 ಜನ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಂದಾಲ್‌ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾದಂತಾಗಿದೆ.

ಸೋಂಕು ಪತ್ತೆಯಾಗಿರುವ ಸೋಂಕಿತರ ಮನೆ ಮತ್ತು ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡುವ ಕಾರ್ಯಗಳು ನಡೆಯುತ್ತಿದೆ. ನಗರದ ಶಂಕರ್‌ ಕಾಲೋನಿ ನಿವಾಸಿಯಾಗಿದ್ದ ಜಿಂದಾಲ್‌ ನೌಕರನಿಗೆ ಸೋಂಕು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಶಂಕರ್‌ ಕಾಲೋನಿಯ ಅವರ ಮನೆ, ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next