Advertisement

71ಕ್ಕೆ ಏರಿದ ಕೋವಿಡ್‌ ಸೋಂಕು

12:44 PM Jun 10, 2020 | Naveen |

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಮೂವರಲ್ಲಿ ಕೋವಿಡ್‌-19 ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಕೋಗಳಿ ಗ್ರಾಮದ 60 ವರ್ಷದ ವೃದ್ಧೆಗೆ ಸೋಂಕು ಆವರಿಸಿದೆ. ಅಲ್ಲದೇ ಜಿಂದಾಲ್‌ ಸಂಸ್ಥೆಯಲ್ಲಿ ಮೊದಲು ಕಾಣಿಸಿಕೊಂಡ ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮತ್ತಿಬ್ಬರು ನೌಕರರಾದ ಬಳ್ಳಾರಿ ನಗರದ ಎಂ.ಕೆ.ನಗರ, ಹವಂಬಾವಿ ನಿವಾಸಿಗಳಲ್ಲಿ ಸೋಂಕು ಆವರಿಸಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಮಾಹಿತಿ ನೀಡಿದ್ದಾರೆ.

ಇದರಿಂದ ಜಿಂದಾಲ್‌ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 71ಕ್ಕೆ ಏರಿಕೆಯಾಗಿದೆ. ಈ ವರೆಗೆ 49 ಜನರು ಸೋಂಕಿನಿಂದ ಗುಣಮುಖವಾಗಿ ಮನೆಗೆ ಹೋಗಿದ್ದು, 21 ಸಕ್ರಿಯ ಪ್ರಕರಣಗಳಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next