Advertisement

ಕೆರೆಗೆ ಈಜಲು ಹೋಗಿದ್ದ ಇಬ್ಬರು ನೀರುಪಾಲು : ಸಂಡೂರಿನ ಶಿವಪುರ ಕೆರೆಯಲ್ಲಿ ದುರ್ಘಟನೆ

08:47 PM Jun 05, 2022 | Team Udayavani |

ಬಳ್ಳಾರಿ: ಜಿಲ್ಲೆಯ ಸಂಡೂರು ಪಟ್ಟಣ ಹೊರವಲಯದ ಶಿವಪುರ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

Advertisement

ಸಂಡೂರಿನ ದತ್ತಾತ್ರೇಯ (27) ಹಾಗೂ ನಾಗರಾಜ್ (26) ಮೃತ ದುರ್ದೈವಿಗಳು. ಇವರು ಭಾನುವಾರ ಮಧ್ಯಾಹ್ನ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನಡು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸಂಡೂರಿನ ಅಗ್ನಿಶಾಮಕದಳ, ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಒಪ್ಪಿಸಲಾಗಿದೆ.

ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ವಿಜಯನಗರ : ಫಾಸ್ಟ್ ಫುಡ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ; ಇಬ್ಬರು ಸ್ಥಳದಲ್ಲೇ ಸಾವು

Advertisement
Advertisement

Udayavani is now on Telegram. Click here to join our channel and stay updated with the latest news.

Next