Advertisement
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ಜಿಪಂ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 7.5 ಕೋಟಿ ರೂ. ವೆಚ್ಚದಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರರ ವಸತಿ ಗೃಹಗಳು, ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಗೆ ವಸತಿ ನಿಲಯ, ಡಿಎನ್ಬಿ ಸೆಮಿನಾರ್ ಹಾಲ್ ಕಟ್ಟಡ ಕಾಮಗಾರಿಗಳಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಕಲ್ಪಿಸುವಿಕೆ ಹಾಗೂ ಮೇಲ್ದರ್ಜೆಗೇರಿಸುವಿಕೆಗೆ ಸಂಬಂಧಿ ಸಿದಂತೆ ಬಜೆಟ್‌ನಲ್ಲಿ ಸೇರ್ಪಡೆ ಮಾಡಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದರು.
Related Articles
Advertisement
ಆಶಾ ಕಾರ್ಯಕರ್ತೆಯರಿಗೆ ಕೆಲದಿನಗಳ ಹಿಂದೆ 500 ಗೌರವ ಧನ ಹೆಚ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅವರ ಗೌರವ ಧನ 10 ಸಾವಿರ ರೂ.ಹೆಚ್ಚಿಸಲು ಕ್ರಮವಹಿಸಲಾಗುವುದು. ರಾಜ್ಯ ಸರ್ಕಾರದ ಅಧಿಧೀನದಲ್ಲಿ ಕಾರ್ಯನಿರ್ವಹಿಸುವ ನರ್ಸ್‌ಗಳ ವೇತನವನ್ನು 6 ಸಾವಿರ ರೂಗಳಿಂದ 17 ಸಾವಿರಕ್ಕೆ ಹೆಚ್ಚಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಅದೇ ರೀತಿ ಕೇಂದ್ರ ಸರ್ಕಾರ ಎನ್‌ಆರ್‌ಎಚ್‌ಎಂ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನರ್ಸ್‌ಗಳಿಗೂ ಉತ್ತಮ ವೇತನ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ. ಸೋಮಶೇಖರರೆಡ್ಡಿ ಮಾತನಾಡಿ, ಸಚಿವ ಶ್ರೀರಾಮುಲು ಅವರು ಈ ಹಿಂದೆ ಸಚಿವರಾಗಿದ್ದಾಗ ಆರೋಗ್ಯ ಶ್ರೀ, 108 ವಾಹನಗಳನ್ನು ಜಾರಿಗೆ ತಂದಿದ್ದಾರೆ. ಅದೇ ರೀತಿ ಇದೀಗ 104 ಹೆಸರಿನಲ್ಲಿ ಆಪರೇಷನ್ ಸೌಲಭ್ಯವುಳ್ಳ ವಾಹನವನ್ನು ಜಾರಿಗೆ ತಂದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಣ್ಣು ಸೇರಿದಂತೆ ಚಿಕ್ಕ ಸಮಸ್ಯೆಗಳಿಂದ ಬಳಲುತ್ತಿರುವ ವೃದ್ಧರು, ಮಹಿಳೆಯರಿಗೆ ಸ್ಥಳದಲ್ಲೇ ಶಸ್ತ್ರಚಿಕಿತ್ಸೆ ಮಾಡಲು ಅನುಕೂಲವಾಗಲಿದೆ ಎಂದು ಕೋರಿದರು. ಸಂಸದ ವೈ. ದೇವೇಂದ್ರಪ್ಪ, ವಿಧಾನಪರಿಷತ್ ಕೆ.ಸಿ.ಕೊಂಡಯ್ಯ ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಸಿ ಎಸ್.ಎಸ್. ನಕುಲ್, ಜಿಪಂ ಸಿಇಒ ಕೆ. ನಿತೀಶ್, ಅಪರ ಜಿಲ್ಲಾ ಧಿಕಾರಿ ಸತೀಶಕುಮಾರ್, ಡಿಎಚ್‌ಒ ಡಾ| ಶಿವರಾಜ ಹೆಡೆ ಮತ್ತಿತರರು ಇದ್ದರು. ಈಶ್ವರ್ ದಾಸಪ್ಪನವರ್ ನಿರೂಪಿಸಿದರು.