Advertisement

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಣಯ

06:46 PM Feb 06, 2020 | Naveen |

ಬಳ್ಳಾರಿ: ವಿವಿಧ ಮಹನೀಯರ ಜಯಂತಿಗಳನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಮಹನೀಯರು ನಾಡಿಗೆ ನೀಡಿದ ಕೊಡುಗೆ ಅಪಾರ. ಅದನ್ನು ಗುರುತಿಸಿ ಸರಕಾರ ಜಯಂತಿಗಳನ್ನು ಆಚರಿಸುತ್ತಿದ್ದು, ಆದ್ದರಿಂದ ಈ ಮಹನೀಯರ ಜಯಂತಿಗಳನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿ ಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಸೂಚನೆ ನೀಡಿದರು.

ಸಂತ ಸೇವಾಲಾಲ್‌, ಛತ್ರಪತಿ ಶಿವಾಜಿ, ಕವಿ ಸರ್ವಜ್ಞ ಹಾಗೂ ಕಾಯಕ ಶರಣರಾದ ಉರಿಲಿಂಗಪೆದ್ದಿ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮೇದಾರ ಕೇತಯ್ಯ, ಮಾದರ ಧೂಳಯ್ಯನವರ ಜಂಯಂತಿಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ವಿವಿಧ ದಿನಾಂಕಗಳಂದು ಬೆಳಗ್ಗೆ 9:30ಕ್ಕೆ ನಗರದ ಮುನ್ಸಿಪಲ್‌ ಮೈದಾನದಿಂದ ಆರಂಭವಾಗುವ ಭಾವಚಿತ್ರದ ಮೆರವಣಿಗೆ ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ, ಗವಿಯಪ್ಪ ವೃತ್ತ, ಹೆಚ್‌.ಆರ್‌.ಜಿ ಗವಿಯಪ್ಪ ವೃತ್ತದ ಮೂಲಕ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪುತ್ತದೆ. ನಂತರ ವೇದಿಕೆ ಕಾರ್ಯಕ್ರಮಗಳು ನಡೆಯಲಿದ್ದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಎಸ್‌. ಸವದಿಯವರು ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ನಗರ ಶಾಸಕ ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಲಿದ್ದು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ನೀಡಲಾಗುತ್ತದೆ ಎಂದು ಅವರು ವಿವರಿಸಿದರು.

ಫೆ. 15ರಂದು ಸಂತ ಸೇವಲಾಲ್‌ ಜಯಂತಿ, ಫೆ. 19ರಂದು ಛತ್ರಪತಿ ಶಿವಾಜಿ ಜಯಂತಿ, ಫೆ. 20ರಂದು ಕವಿ ಸರ್ವಜ್ಞ ಜಯಂತಿ, ಫೆ. 21ರಂದು ಕಾಯಕ ಶರಣರ ಜಯಂತಿಗಳು ನಡೆಯಲಿವೆ ಎಂದು ಅವರು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಶ ರಂಗಣ್ಣವರ, ಸಹಾಯಕ ಆಯುಕ್ತ ರಮೇಶ್‌ ಕೋನರೆಡ್ಡಿ, ಡಿವೈಎಸ್ಪಿ ರಾಮರಾವ, ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ಉಪನಿರೀಕ್ಷಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು ಹಾಗೂ ವಿವಿಧ ಸಮುದಾಯದ ಮುಖಂಡರುಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next