Advertisement

31ರಂದು ಜಿಲ್ಲಾಮಟ್ಟದ ವಿದ್ಯಾರ್ಥಿ ಸಮ್ಮೇಳನ ಆಯೋಜನೆ

04:03 PM Jul 27, 2019 | Naveen |

ಬಳ್ಳಾರಿ: ನಗರದ ಗಾಂಧಿಭವನದಲ್ಲಿ ಜುಲೈ 31ರಂದು ಒಂದು ದಿನದ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನವನ್ನು ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಗೋವಿಂದ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ರಾಷ್ಟ್ರೀಯ ಶಿಕ್ಷಣ ನೀತಿ-2019 ಶಿಕ್ಷಣದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ನೇರ ಶಿಫಾರಸ್ಸು ನೀಡಿದೆ. ಶಿಕ್ಷಣ ವಿರೋಧಿ ನೀತಿಯನ್ನು ಹಿಮ್ಮೆಟ್ಟಿಸಲು ಸಂಘಟನೆ ರಾಜಿರಹಿತ ಹೋರಾಟ ನಡೆಸಲಿದೆ. ಅದರ ಭಾಗವಾಗಿ ಸಮ್ಮೇಳನದಲ್ಲಿ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎಂದರು.

ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಕುಲಸಚಿವೆ ಪ್ರೊ. ತುಳಸಮಾಲಾ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಚ್.ಪಿ.ಭರತ್‌ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಸಮ್ಮೇಳನದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ನೂರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶಿಕ್ಷಣ ವಿರೋಧಿ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಪರವಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗುವುದು ಎಂದವರು ತಿಳಿಸಿದರು.

ಹಕ್ಕೊತ್ತಾಯಗಳು:ಸರ್ಕಾರಿ ಶಾಲಾ ಕಾಲೇಜುಗಳನ್ನು ಮುಚ್ಚುವ ಬದಲು, ಅಗತ್ಯಕ್ಕೆ ತಕ್ಕಂತೆ ಹೆಚ್ಚಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸಿ, ಶಾಲಾ ಕಾಲೇಜು ಮತ್ತು ವಿವಿಗಳನ್ನು ಬಲಪಡಿಸಬೇಕು. ಶುಲ್ಕ ಹೆಚ್ಚಳ ನಿಯಂತ್ರಿಸಿ, ಡೊನೇಷನ್‌ ಹಾವಳಿಗೆ ಕಡಿವಾಣ ಹಾಕಬೇಕು. ಅವಶ್ಯಕತೆಗನುಗುಣವಾಗಿ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿನಿಲಯಗಳನ್ನು ಹೆಚ್ಚಿಸಬೇಕು. ಪ್ರತಿ ವಿದ್ಯಾರ್ಥಿಯ ಮಾಸಿಕ ಅನುದಾನ 4 ಸಾವಿರಕ್ಕೆ ಹೆಚ್ಚಿಸಬೇಕು. ವಿಳಂಬ ಮಾಡದೇ ಶೀಘ್ರ ಪ್ರವೇಶಾತಿ ಕಲ್ಪಿಸಬೇಕು. ವಿವಿ, ಪದವಿ ಕಾಲೇಜುಗಳ ಪ್ರವೇಶ, ಪರೀಕ್ಷಾ, ಮರುಮೌಲ್ಯಮಾಪನ ಶುಲ್ಕ ಹೆಚ್ಚಳವನ್ನು ನಿಲ್ಲಿಸಬೇಕು. ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ಶೇ. 30ರಷ್ಟು ಮತ್ತು ಕೇಂದ್ರ ಸರ್ಕಾರ ಶೇ.10ರಷ್ಟು ಅನುದಾನ ಮೀಸಲಿಡಬೇಕು. ಜಿಲ್ಲೆಯಲ್ಲಿರುವ ಸರ್ಕಾರಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಿಗೆ ಮೂಲ ಸೌಲಭ್ಯ ಒದಗಿಸಬೇಕು. ಈ ಮೇಲಿನ ಎಲ್ಲ ಬೇಡಿಕೆಗಳಿಲ್ಲದೇ ಇನ್ನಿತರ ವಿಷಯಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಗುವುದು ಎಂದರು.

ಇದಕ್ಕೂ ಮುನ್ನ ನಗರದ ನಗರೂರು ನಾರಾಯಣರಾವ್‌ ಉದ್ಯಾನವನದಿಂದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಮೆರವಣಿಗೆ ಮೂಲಕ ಸಮ್ಮೇಳನಕ್ಕೆ ತೆರಳಲಾಗುವುದು ಎಂದು ತಿಳಿಸಿದರು. ನೇಮಕಲ್ ಜಗದೀಶ್‌, ಕಾರ್ಯದರ್ಶಿ ಜಿ. ಸುರೇಶ್‌, ಜಂಟಿ ಕಾರ್ಯದರ್ಶಿ ಜೆ.ಪಿ. ರವಿಕಿರಣ್‌ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next