ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆಗೆ ಸಂಬಂ ಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಜಿಲ್ಲಾ ಇಬ್ಭಾಗ ಸರಿಯಲ್ಲ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಮತ್ತೂಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅನರ್ಹ ಶಾಸಕ ಆನಂದ ಸಿಂಗ್ ಪ್ರತ್ಯೇಕ ಜಿಲ್ಲೆ ರಚನೆ ಕೂಗು ಎಬ್ಬಿಸಿರುವುದಕ್ಕೆ ಸರ್ಕಾರ ಮಣೆ ಹಾಕಬಾರದು. ಆನಂದಸಿಂಗ್ ಅವರೊಬ್ಬರ ರಾಜೀನಾಮೆಯಿಂದಾಗಿ ಈ ರೀತಿಯ ನಿರ್ಧಾರ ಕೈಗೊಳ್ಳಬಾರದು. ಈ ಕುರಿತು ಸಿಎಂಗೂ ಮನವಿ ಮಾಡಲಾಗಿದೆ. ಈ ವಿಚಾರ ಮತ್ತೆ ಮುನ್ನೆ ಲೆಗೆ ಬಂದಿರುವುದು ಸರಿಯಲ್ಲ ಎಂದರು.
ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಕ್ಕೆ ರಾಜ್ಯ ಸರ್ಕಾರ ಹೊಸ ಜಿಲ್ಲೆ ಘೋಷಣೆಗೆ ಮುಂದಾದರೆ ಜಿಲ್ಲೆಯಲ್ಲಿ ನಾಲ್ಕು ಮಂದಿ ಬಿಜೆಪಿ ಶಾಸಕರಿದ್ದೇವೆ. ವಿಜಯ ನಗರ ಜಿಲ್ಲೆ ಆಗಬಾ ರದು ಎಂದು ನಾವು ನಾಲ್ವರೂ ರಾಜೀ ನಾಮೆ ನೀಡಿದರೆ ಹೇಗೆ ಎಂದು ಪ್ರಶ್ನಿಸಿದ ರೆಡ್ಡಿ, ಮುಖ್ಯಮಂತ್ರಿಗಳು ಆತುರದ ನಿರ್ಣಯ ಕೈಗೊಳ್ಳಬಾರದು. ಎಲ್ಲರನ್ನೂ ಕರೆದು ಚರ್ಚೆ ಮಾಡಬೇಕಿತ್ತು ಎಂದರು.
ಈ ವಿಷಯವಾಗಿ ಈಗಾಗಲೇ ಯಡಿ ಯೂರಪ್ಪನವರಿಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ಜಿಲ್ಲೆ ಇಬ್ಭಾಗ ಮಾಡ ಬಾರದು. ಅಖಂಡ ಬಳ್ಳಾರಿ ಜಿಲ್ಲೆಯಾಗಿಯೇ ಮುಂದುವರಿಸಬೇಕು ಎಂದು ಒತ್ತಾಯ ಮಾಡಿದ್ದೇವೆ ಎಂದರು. ಅಖಂಡ ಬಳ್ಳಾರಿ ಜಿಲ್ಲೆ ನಮ್ಮ ಗುರಿ. ಈ ಕುರಿತು ಚರ್ಚಿಸಲು ಕೂಡಲೇ ಸಿಎಂ ಶಾಸಕರ ಸಭೆ ಕರೆಯಬೇಕು. ಜಿಲ್ಲೆಯ ನಾಲ್ವರು ಬಿಜೆಪಿ ಶಾಸಕರ ಅಭಿಪ್ರಾಯವನ್ನು ಮೊದಲು ಪರಿಗಣಿಸಬೇಕು.
ಆಮೇಲೆ ಜಿಲ್ಲೆ ಇಬ್ಭಾಗದ ಕುರಿತು ಸೂಕ್ತ ನಿರ್ಧಾರ ಪ್ರಕಟಿಸಬೇಕು. ಈಗಾಗಲೇ ರಾಜ್ಯ ಸರ್ಕಾರ ಕೊಪ್ಪಳ, ಯಾದಗಿರಿ ಯನ್ನು ಜಿಲ್ಲೆಗಳನ್ನಾಗಿ ಘೋಷಿ ಸಿದೆ. ಹಾಗಂತ ಕೇವಲ ಡೀಸಿ ಕಚೇರಿ ಸೇರಿ ಇನ್ನಿತರೆ ಕಚೇರಿಗಳು ಕಾರ್ಯನಿರ್ವಹಿಸಿದರೆ ಸಾಲದು. ಅಭಿವೃದ್ಧಿ ದೃಷ್ಟಿಕೋನದಲ್ಲಿ ನೋಡುವುದಾದರೆ ಪ್ರತ್ಯೇಕ ಜಿಲ್ಲೆಗಳಾದ ಮೇಲೆ ಆ ಜಿಲ್ಲೆಗಳಲ್ಲಿ ಶೂನ್ಯ ಸಾಧನೆಯಾಗಿದೆ ಎಂದರು.
ನವೆಂಬರ್‌ನಲ್ಲಿ ಹಂಪಿ ಉತ್ಸವ: ಪ್ರತಿವರ್ಷದಂತೆ ಈ ಬಾರಿಯೂ ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಿಸಲಾಗುವುದು. ಈ ಕುರಿತು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೇವೆ. ಉತ್ಸವ ನಡೆಯದಿದ್ದರೆ ಹೋರಾಟ ಮಾಡುತ್ತೇವೆ ಎಂದರು.