ಬಳ್ಳಾರಿ: “ಪದೇ ಪದೆ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿಯವರಿಗೆ ಗಣಿನಾಡು ಬಳ್ಳಾರಿ ಲೋಕಸಭೆ ಉಪಚುನಾವಣೆಯ ಫಲಿತಾಂಶವೇ ತಕ್ಕ ಉತ್ತರ ನೀಡಿದೆ. ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಭಾರತಕ್ಕೆ ಈ ಫಲಿತಾಂಶ ನಾಂದಿಯಾಗಲಿದೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ| ಪುಷ್ಪಾ ಅಮರನಾಥ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣಿ ಜಿಲ್ಲೆ ಬಳ್ಳಾರಿ ಕೇವಲ ರಾಜ್ಯ ಮಾತ್ರವಲ್ಲ, ಕಳೆದ ಲೋಕಸಭೆ
ಉಪಚುನಾವಣೆಯಲ್ಲಿ ದೇಶದ ಗಮನ ಸೆಳೆದಿದೆ.
ಜಿಲ್ಲೆಯ ಜನರು ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಶಕ್ತಿ ಕೊಡುವ, ಜಿಲ್ಲೆಯ ಜನರಿಗೆ ಧೈರ್ಯ ತುಂಬುವ ಫಲಿತಾಂಶ ಇದಾಗಿದೆ. ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿಯವರಿಗೆ ಫಲಿತಾಂಶ ತಕ್ಕ ಪಾಠ ಕಲಿಸಿದೆ. ಈ ಫಲಿತಾಂಶ ಮುಂಬರುವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಭಾರತ ಎಂಬುದಕ್ಕೆ ಪರೋಕ್ಷವಾಗಿ ಸಂದೇಶ ಸಾರಿದೆ ಎಂದು ಹೇಳಿದರು.
ಲಕ್ಷ್ಮೀ ಹೆಬ್ಟಾಳಕರ್‌ಗೂ, ನನಗೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈ ಹಿಂದೆ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಅವರು ಮತ್ತು ನಾನು ಇಬ್ಬರೂ ಸೇರಿ ಕೆಲಸ ಮಾಡಿದ್ದೇವೆ. ನಾವಿಬ್ಬರೂ ಒಳ್ಳೆಯ ಸ್ನೇಹಿತೆಯರು. ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಿ ನನ್ನನ್ನು ಕೂಡಿಸಿಲ್ಲ. ಅವರ ಅವಧಿ ಮುಗಿಯಿತು. ಮೇಲಾಗಿ ಅವರು ಶಾಸಕರಾಗಿದ್ದಾರೆ.
– ಡಾ| ಪುಷ್ಪಾ ಅಮರನಾಥ್,
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ.