Advertisement

ಬಳ್ಳಾರಿ ವಿವಾದ: ದಶಕದಲ್ಲಿ ಐವರು ಸಚಿವರ ರಾಜೀನಾಮೆ!

11:06 PM Jun 06, 2024 | Team Udayavani |

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯ ರಾಜಕೀಯ ನಾಯಕರಿಗೂ ವಿವಾದಕ್ಕೂ ಬೆಂಬಿಡದ ನಂಟು ಇದ್ದಂತಿದೆ. ಒಂದು ದಶಕದಲ್ಲಿ ಹಲವು ರಾಜಕೀಯ ನಾಯಕರು ವಿವಾದ, ಅಕ್ರಮದ ಆರೋಪಕ್ಕೆ ತುತ್ತಾಗಿದ್ದಾರೆ. ಕೆಲವರು ರಾಜೀನಾಮೆ ಸಲ್ಲಿಸಿ ಅಧಿಕಾರ ಕಳೆದುಕೊಂಡಿದ್ದಾರೆ. ಈಗ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿ ಸಿ ನಾಗೇಂದ್ರ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ನಾಗೇಂದ್ರ ಕೂಡ ಇದೇ ಬಳ್ಳಾರಿಯವರು.

Advertisement

ನೈಸರ್ಗಿಕ ಸಂಪತ್ತು, ಐತಿಹಾಸಿಕ ಪ್ರವಾಸಿ ತಾಣಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬಳ್ಳಾರಿ, ಅಕ್ರಮ ಗಣಿಗಾರಿಕೆಯಿಂದ ಅಷ್ಟೇ ಕುಖ್ಯಾತಿಯನ್ನೂ ಪಡೆದಿದೆ. ಹೀಗಾಗಿ ಅಕ್ರಮ ಗಣಿಗಾರಿಕೆ ಸಹಿತ ಇನ್ನಿತರ ಭ್ರಷ್ಟಾಚಾರದ ಆರೋಪಗಳಿಗೆ ಜಿಲ್ಲೆಯ ಸಚಿವರ ತಲೆದಂಡಗಳೂ ಆಗಿವೆ.
ಕಳೆದ ಒಂದು ದಶಕದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು, ಧಾರವಾಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌, ಮಾಜಿ ಸಚಿವ ಪಿ.ಟಿ. ಪರಮೇಶ್ವರ್‌ ನಾಯ್ಕ ಅವರು ಅಕ್ರಮಗಳ ಆರೋಪಕ್ಕೆ ಸಂಬಂಧಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ನಾಗೇಂದ್ರ ಸರದಿ.

ಅಕ್ರಮ ಗಣಿಗಾರಿಕೆ ಉರುಳು
2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿ ಕಾರದಲ್ಲಿದ್ದಾಗ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ ಹೆಚ್ಚು ಸದ್ದು ಮಾಡಿತು. ಹಾಲಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಿಂದಲೇ ಬಳ್ಳಾರಿಗೆ ಪಾದಯಾತ್ರೆ ಮಾಡಿದರು. ಪರಿಣಾಮ ಅಂದಿನ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸ್ವಾಭಾವಿಕವಾಗಿ ಅಂದಿನ ಸಚಿವರಾಗಿದ್ದ ಜಿ.ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲು ಸಹಿತ ಹಲವರು ಸಚಿವ ಸ್ಥಾನ ಕಳೆದುಕೊಂಡಿದ್ದರು. ಅಲ್ಲದೆ, ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಸಿಬಿಐ ಬಂಧನಕ್ಕೊಳಗಾಗಿದ್ದರು. ಲೋಕಾಯುಕ್ತ ವರದಿಯಲ್ಲಿ ಹೆಸರು ಬಂದಿದ್ದಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅ ಧಿಕಾರ ಕಳೆದುಕೊಳ್ಳಬೇಕಾಯಿತು.

ಲಾಡ್‌ ರಾಜೀನಾಮೆ
2013ರಲ್ಲಿ ರಾಜ್ಯದಲ್ಲಿ ಅ ಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರಕಾರದಲ್ಲಿ ಸಿಎಂ ಸಿದ್ದರಾಮಯ್ಯ, ಮೊದಲ ಅವ ಧಿಯಲ್ಲೇ ಸಂತೋಷ್‌ ಎಸ್‌.ಲಾಡ್‌ ಅವರಿಗೆ ವಾರ್ತಾ ಮತ್ತು ಪ್ರಸಾರ ಖಾತೆ ನೀಡುವ ಜತೆಗೆ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ವಹಿಸಿದ್ದರು. ಆದರೆ ಅಧಿ ಕಾರ ವಹಿಸಿಕೊಂಡ 6 ತಿಂಗಳಲ್ಲೇ ಇವರ ವಿರುದ್ಧ ಅಕ್ರಮ ಗಣಿಗಾರಿಕೆ, ಅರಣ್ಯ ನಾಶ ಪ್ರಕರಣಕ್ಕೆ ಸಂಬಂಧಿ ಸಿ ಅಂದು ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ಆರೋಪಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

– ವೆಂಕೋಬಿ ಸಂಗನಕಲ್ಲು

Advertisement
Advertisement

Udayavani is now on Telegram. Click here to join our channel and stay updated with the latest news.

Next