Advertisement

ಡಾ|ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಮನವಿ

12:26 PM May 22, 2020 | Naveen |

ಬಳ್ಳಾರಿ: ಡಾ| ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಸೈನ್ಯ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

Advertisement

ದೇಶದಲ್ಲಿ ಕೈಗಾರಿಕಾ ಅಭಿವೃದ್ಧಿ ಆರಂಭವಾದಾಗನಿಂದ ಇಲ್ಲಿವರೆಗೆ ಸ್ಥಳೀಯರಿಗೆ ಕಾರ್ಖಾನೆಗಳಲ್ಲಿ ಹೆಚ್ಚಿನ ಉದ್ಯೋಗಗಳು ದೊರೆಯುತಿಲ್ಲ. ಈ ಕುರಿತು ಸಾಕಷ್ಟು ಹೋರಾಟಗಳು ನಡೆಸಿದರೂ ಆಳುವ ಸರ್ಕಾರಗಳಿಂದ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯದ ಬಳ್ಳಾರಿ, ಕೊಪ್ಪಳದಲ್ಲಿ ಜಿಂದಾಲ್‌, ಕಲ್ಯಾಣಿ, ಕಿರ್ಲ್ಕೋಸ್ಕರ್‌, ಹೊಸಪೇಟೆ ಸ್ಟೀಲ್ಸ್‌, ಎಸಿಸಿ, ಕೆಪಿಆರ್‌ ಕಾರ್ಖಾನೆಗಳಲ್ಲಿ ಕನ್ನಡಗರಿಗೆ ಅವಕಾಶಗಳೇ ಸಿಗುತ್ತಿಲ್ಲ. ಈ ಕುರಿತು ಸರ್ಕಾರದ ಗಮನಸೆಳೆದರೂ ಇಲ್ಲಿವರೆಗೆ ಕ್ರಮವಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಸರೋಜಿನಿ ಮಹಿಷಿ ವರದಿ ಪ್ರಕಾರ ಇಂತಹ ಕೋವಿಡ್ ವಿಪತ್ತಿನ ಸಂದರ್ಭದಲ್ಲಿ ಸ್ಥಳೀಯ ಅಥವಾ ಕನ್ನಡಿಗ ನಿರುದ್ಯೋಗ ಯುವಕರಿಗೆ ಕೆಲಸ ನೀಡಿದರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ, ಇದರ ಜೊತೆಗೆ ನಿರುದ್ಯೋಗ ಸಮಸ್ಯೆ ಕೂಡ ನಿವಾರಣೆ ಆಗಲಿದೆ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ಜನಸೈನ್ಯದ ರಾಜ್ಯ ಉಪಾಧ್ಯಕ್ಷ ಬಿ.ಹೊನ್ನೂರಪ್ಪ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಹೊನ್ನೂರು ಸ್ವಾಮಿ, ಸಲಹಾ ಸಮಿತಿ ಸದಸ್ಯರಾದ ಚೆಂಚಯ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ಪಿ.ಗುರುರಾಘವೇಂದ್ರ, ಸ್ಫೂರ್ತಿ ಸೈನ್ಯದ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ ಶೆಟ್ಟಿ, ಉತ್ತರ ಕರ್ನಾಟಕ ಉಪಾಧ್ಯಕ್ಷ ಫಯಾಜ್‌ಬಾಷ, ನಾಸೀರ್‌, ಚಿಟ್ಟಿ, ಲೋಕೇಶ್‌ ಯಾದವ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next