Advertisement

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

08:38 AM May 18, 2020 | keerthan |

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕು ಖಾನಾಹೊಸಳ್ಳಿ ಬಸ್ ನಿಲ್ದಾಣ ಬಳಿ ಭಾನುವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಮುದ್ದೆಬಿಹಾಳ ಮೂಲದ ಮೂವರು ಸ್ಥಳದ್ದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 50 ರ ಫ್ಲೈಓವರ್ ನಲ್ಲಿ ನೀರು ನಿಂತಿದೆ. ಈ ವೇಳೆ ಅತ್ಯಂತ ವೇಗವಾಗಿ ಬಂದ ಕಂಟೈನರ್ ಲಾರಿ ಮತ್ತು ಕಾರುಗಳ ನಡುವೆ ಢಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಕಾರಿನ ಚಾಲಕ ದೇವರಾಜ (21) ಸೇರಿ ಮುದ್ದೆಬಿಹಾಳ ಮೂಲದ  ಭೀಮರಾಯ(38), ಅಂಜಲಿ ದೇವಿ(14) ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ, ಕೊಟ್ಟೂರು ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next