Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಜರಾಯಿ ಮತ್ತು ಮೀನುಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಜಿಲ್ಲೆಯಲ್ಲಿ ಪ್ರಸ್ತುತ 100ಕ್ಕೂ ಹೆಚ್ಚು ದೊಡ್ಡ ಕೆರೆ, 50ಕ್ಕೂ ಹೆಚ್ಚು ಸಣ್ಣ ಕೆರೆಗಳು ಹಾಗೂ 20 ಸಾವಿರ ಹೇಕ್ಟರ್ ನೀರಾವರಿ ಪ್ರದೇಶಗಳಲ್ಲಿ 2 ಕೋಟಿ ಮೀನು ಉತ್ಪಾದನೆ ಆಗುತ್ತಿದ್ದು, ಇದನ್ನು 4-5 ಕೋಟಿ ಉತ್ಪಾದನೆ ಮಾಡಲು ಹೊಸ ಯೋಜನೆಗಳನ್ನು ರೂಪಿಸಬೇಕು ಎಂದರು.
ಹಂಪಿ ಉತ್ಸವದಲ್ಲಿ ಮತ್ಸ್ಯ ಮೇಳ: ಜ. 11 ಮತ್ತು 12 ರಂದು ಹಂಪಿಯಲ್ಲಿ ನಡೆಯಲಿರುವ ಹಂಪಿ ಉತ್ಸವದಲ್ಲಿ ಮತ್ಸ್ಯ ಮೇಳವನ್ನು ಆಯೋಜಿಲಾಗುತ್ತದೆ. ಈ ಮೇಳದಲ್ಲಿ ಅಲಂಕಾರಿಕವಾದ ಮತ್ಸ್ಯಗಳನ್ನು ಪ್ರದರ್ಶನ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.
ನಂತರ ಧಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಎಲ್ಲ ಎ-ಶ್ರೇಣಿ, ಬಿ-ಶ್ರೇಣಿ ದೇವಸ್ಥಾನಗಳಲ್ಲಿ ಪಾರದರ್ಶಕವಾದ ಆಡಳಿತವನ್ನು ನಡೆಸಬೇಕು. ಕಾನೂನಿನ ಚೌಕಟ್ಟಿನಲ್ಲಿ ದೇವಸ್ಥಾನದ ಅನುದಾನವನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಠಾಧಿಧೀಶರು ಹಾಗೂ ಇತರೆ ಗಣ್ಯವ್ಯಕ್ತಿಗಳ ಸಮಕ್ಷಮದಲ್ಲಿ ಬೃಹತ್ ಸಾಮೂಹಿಕ ಮದುವೆ ಕಾರ್ಯಕ್ರಮ ಏರ್ಪಡಿಸುವ ಉದ್ದೇಶವಿದೆ ಎಂದರು.
ಎಲ್ಲ ದೇವಸ್ಥಾನದಲ್ಲಿ ಪ್ಲಾಸ್ಟಿಕ್‌ನ್ನು ಉಪಯೋಗಿಸಬಾರದು. ಪ್ಲಾಸ್ಟಿಕ್ ಬ್ಯಾನ್ ಕುರಿತು ದೇವಸ್ಥಾನಗಳಲ್ಲಿ ಫಲಕಗಳನ್ನು ಹಾಕಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎ, ಬಿ ಮತ್ತು ಸಿ-ಶ್ರೇಣಿಯ ದೇವಸ್ಥಾನಗಳ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೇರಿದಂತೆ ಮೀನುಗಾರಿಕೆ, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.