Advertisement

ಕ್ವಾರಂಟೈನ್‌ಗಳಲ್ಲಿ ಉತ್ತಮ ಆಹಾರ ಪೂರೈಸಿ

12:06 PM Jul 09, 2020 | Naveen |

ಬಳ್ಳಾರಿ: ರೋಗಲಕ್ಷಣಗಳಿಲ್ಲದವರನ್ನು ದಾಖಲಿಸಲಾಗುತ್ತಿರುವ ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ ಬಗ್ಗೆ ದೂರುಗಳು ಬರುತ್ತಿದ್ದು, ಗುಣಮಟ್ಟದ ಆಹಾರ ಮತ್ತು ಸಮರ್ಪಕ ಸ್ವಚ್ಛತೆ ಒದಗಿಸುವಂತೆ ಅರಣ್ಯ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್‌. ಆನಂದಸಿಂಗ್‌ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿ ಹಾಗೂ ಡಿಎಚ್‌ಒ ಅವರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಆರೋಗ್ಯ ಸೇವೆ ಸಲ್ಲಿಸುತ್ತಿರುವ 43 ಸರ್ಕಾರಿ ಹಾಗೂ 4 ಜನ ಖಾಸಗಿ ವೈದ್ಯರು ಸೇರಿ, ಸ್ಟಾಫ್‌ ನರ್ಸ್‌, ಲ್ಯಾಬ್‌ ಟೆಕ್ನಿಷಿಯನ್‌, ಗ್ರೂಪ್‌ ಡಿ ಸೇರಿ 108 ಜನ ಆರೋಗ್ಯ ಸೇವೆ ಸಲ್ಲಿಸುತ್ತಿರುವವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದು ಆತಂಕಕಾರಿ ಸಂಗತಿ ಎಂದ ಸಚಿವ ಆನಂದ್‌ಸಿಂಗ್‌, ಸೋಂಕಿತ ವೈದ್ಯರು, ಆರೋಗ್ಯ ಸಿಬ್ಬಂದಿಗಳ ಆರೋಗ್ಯ ಸ್ಥಿತಿಗತಿ ಬಗ್ಗೆ ವಿವರವಾದ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಇದುವರೆಗೆ 1342 ಪ್ರಕರಣಗಳು ದೃಢಪಟ್ಟಿದ್ದು, 8988 ಪ್ರಥಮ ಸಂಪರ್ಕಿತರು, 3472 ಜನರು ದ್ವಿತೀಯ ಸಂಪರ್ಕಿತರಿದ್ದಾರೆ ಎಂದರು. 488 ಜನ ಸೋಂಕಿತರು ಜಿಂದಾಲ್‌ಗೆ ಸೇರಿದವರಾಗಿದ್ದಾರೆ ಮತ್ತು ಈ ಪ್ರದೇಶದಲ್ಲಿ 66 ಕಂಟೈನ್ಮೆಂಟ್‌ ಝೋನ್‌ ಪ್ರದೇಶಗಳನ್ನು ಗುರುತಿಸಲಾಗಿದೆ. ಇಡೀ ಜಿಲ್ಲೆಯಾದ್ಯಂತ 301 ಸಕ್ರಿಯ ಕಂಟೈನ್ಮೆಂಟ್‌ ಝೋನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಡಿಸಿ ಎಸ್‌.ಎಸ್‌ .ನಕುಲ್‌ ಅವರು ಸಚಿವರ ಗಮನಕ್ಕೆ ತಂದರು. ವೈದ್ಯರು, ಲ್ಯಾಬ್‌ ಟೆಕ್ನಿಶಿಯನ್‌, ಸ್ಟಾಫ್‌ ನರ್ಸ್‌, ಗ್ರೂಪ್‌ ಡಿಗೆ ಅರ್ಜಿ ಆಹ್ವಾನಿಸಲಾಗಿತ್ತು.

ಉಳಿದವುಗಳೆಲ್ಲ ಭರ್ತಿಯಾದ್ರೂ ಸಹ ವೈದ್ಯರ ಹುದ್ದೆಗೆ ಒಂದೇ ಒಂದು ಅರ್ಜಿ ಕೂಡ ಬರಲಿಲ್ಲ ಎಂದು ಜಿಲ್ಲಾಧಿಕಾರಿ ನಕುಲ್‌ ಹೇಳಿದರು. ಬಳ್ಳಾರಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ. ನಿತೀಶ್‌, ಎಸ್ಪಿ ಸಿ.ಕೆ.ಬಾಬಾ, ಡಿಎಚ್‌ಒ ಡಾ|ಜನಾರ್ಧನ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next