Advertisement

ಚಿರತೆಗೆ ಬಲಿಯಾದ ಮಹಿಳೆ ಮನೆಗೆ ಆನಂದಸಿಂಗ್‌ ಭೇಟಿ

12:48 PM May 18, 2020 | Naveen |

ಬಳ್ಳಾರಿ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಹೋಬಳಿ ಕೊಟ್ಟಗಾಣಹಳ್ಳಿಯ 62 ವರ್ಷದ ಮಹಿಳೆ ಚಿರತೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಆನಂದ್‌ ಸಿಂಗ್‌ ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

Advertisement

ಸಂಜೆಯಾದ ನಂತರ ಒಬ್ಬೊಬರೆ ಓಡಾಡಬೇಡಿ. ರಾತ್ರಿ ವೇಳೆ ಪಡಸಾಲೆಗಳಲ್ಲಿ ಹಾಗೂ ಮನೆಯಿಂದ ಹೊರಗೆ ನಿದ್ರೆ ಮಾಡಬೇಡಿ. ಸಂಜೆ ವೇಳೆ ಪಟಾಕಿ ಸಿಡಿಸಿ ಎಂದರು. ಮೃತರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಲಾಕಡೌನ್‌ನಿಂದಾಗಿ ಆರ್ಥಿಕ ಸಂಕಷ್ಟದಿಂದಾಗಿ 7.5 ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದೆ. ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಸಚಿವರು, ಗ್ರಾಮದ ಜನರು, ಜನಪ್ರತಿನಿಧಿಗಳಿಂದ ಸಲಹೆಗಳನ್ನು ಸ್ವೀಕರಿಸಿ ಚರ್ಚಿಸಿ ಉತ್ತಮ ಸಲಹೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಶಾಸಕ ಮಂಜುನಾಥ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next