Advertisement

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

11:39 AM Nov 30, 2021 | Team Udayavani |

ಬಳ್ಳಾರಿ: ನೆರೆಯ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಕ್ಕೆ ಆಫ್ರಿಕಾದಿಂದ ಇಬ್ಬರು ಬಂದಿದ್ದು, ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಎಲ್. ಜನಾರ್ಧನ್ ಹೇಳಿದರು.

Advertisement

ಆಫ್ರಿಕಾದಲ್ಲಿ ಪತ್ತೆಯಾಗಿರುವ ಒಮೈಕ್ರಾನ್ ಸೋಂಕು ಎಲ್ಲೆಡೆ ಆತಂಕ ಮೂಡಿಸುತ್ತಿದೆ. ದಕ್ಷಿಣಾಫ್ರಿಕಾ, ಆಸ್ಟ್ರೇಲಿಯಾ, ಹಾಂಕಾಂಗ್ ಸೇರಿ ವಿಶ್ವದ ಒಟ್ಟು 13 ದೇಶಗಳಲ್ಲಿ ಒಮೈಕ್ರಾನ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲೂ ತೀವ್ರ ನಿಗಾ ವಹಿಸಲಾಗುತ್ತಿದೆ. ಆಫ್ರಿಕಾ ದೇಶಕ್ಕೆ ಕೆಲಸದ ನಿಮಿತ್ತ ಹೋಗಿದ್ದ ಇಬ್ಬರು ವ್ಯಕ್ತಿಗಳು ವಿಮಾನದಲ್ಲಿ ಮುಂಬೈಗೆ ಆಗಮಿಸಿ ಅಲ್ಲಿಂದ ಖಾಸಗಿ ವಾಹನದಲ್ಲಿ ಹೊಸಪೇಟೆಗೆ ಬಂದಿದ್ದು, ಮಾಹಿತಿ ಪಡೆದು ಕೂಡಲೇ ಅವರಿಗೆ ತಪಾಸಣೆ ಮಾಡಲಾಗಿದೆ. ಆರ್ ಟಿಪಿಸಿಆರ್ ಪಡೆದು ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ಬಂದಿದೆ. ಆದರೂ, ಇಬ್ಬರನ್ನು ಕ್ವಾರೈಂಟೈನ್ ಮಾಡಲಾಗಿದೆ. ಏಳು ದಿನಗಳ ನಂತರ ಮತ್ತೊಮ್ಮೆ ಪರೀಕ್ಷಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.  ರಾಜ್ಯ ಸರ್ಕಾದರಿಂದಲೂ ಯಾವುದೇ ಮಾರ್ಗಸೂಚಿಗಳು ಬಂದಿಲ್ಲ. ಮೇಲಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಡಾ. ಇಂದ್ರಾಣಿ, ಮಕ್ಕಳ ರಕ್ಷಣಾಧಿಕಾರಿ ರಾಜಾನಾಯ್ಕ್, ಸೇರಿ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next