Advertisement

ನೀತಿ ಸಂಹಿತೆ; ಪೇಡ್‌ನ್ಯೂಸ್ ಮೇಲೆ ಹದ್ದಿನ ಕಣು

04:39 PM Nov 15, 2019 | Naveen |

ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಈಗಾಗಲೇ ನೀತಿಸಂಹಿತೆ ಜಾರಿಯಾಗಿದ್ದು, ಮಾಧ್ಯಮಗಳ ನೀತಿ ಸಂಹಿತೆ ಉಲ್ಲಂಘನೆ, ಪೇಡ್‌ ನ್ಯೂಸ್‌ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಎಂಸಿಎಂಸಿ ನೋಡಲ್‌ ಅಧಿಕಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಹೇಳಿದರು.

Advertisement

ನಗರದ ವಾರ್ತಾಭವನದಲ್ಲಿ ಎಂಸಿಎಂಸಿ ಸಮಿತಿ ಸದಸ್ಯರಿಗೆ ಹಾಗೂ ಮಾಧ್ಯಮ ಕಣ್ಗಾವಲು ಸಿಬ್ಬಂದಿಗೆ ಗುರುವಾರ ಆಯೋಜಿಸಿದ್ದ ಎಂಸಿಎಂಸಿ ಸಮಿತಿ ಕಾರ್ಯವೈಖರಿ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣೆ ಆಯೋಗ ಈಗಾಗಲೇ ಸಕಲ ಕ್ರಮಗಳನ್ನು ಕೈಗೊಂಡಿದೆ. ಅದರ ಸೂಚನೆ ಅನ್ವಯ ಬಳ್ಳಾರಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿ ರಚಿಸಲಾಗಿದೆ. ”ಪೇಡ್‌ ನ್ಯೂಸ್‌” ತಡೆಗಟ್ಟಲು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಮಾಧ್ಯಮ ಸಂಬಂಧಿತ ಅರ್ಜಿಗಳು, ಅನುಮತಿಗಳನ್ನು ಸರಾಗವಾಗಿ ನೀಡುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ಕೇಬಲ್‌ ವಾಹಿನಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.

ಎಂಸಿಎಂಸಿ ಸಮಿತಿಗೆ ನೆರವಾಗಲು ದಿನಪತ್ರಿಕೆಗಳನ್ನು ಹಾಗೂ ಸ್ಥಳೀಯ ಕೇಬಲ್‌ ವಾಹಿನಿಗಳನ್ನು ವೀಕ್ಷಿಸಲು, ಮಾಧ್ಯಮ ಪ್ರಮಾಣೀಕರಣಕ್ಕೆ ಒಟ್ಟು 20 ಸಿಬ್ಬಂದಿ ನಿಯೋಜಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ ವಿದ್ಯುನ್ಮಾನ ವಾಹಿನಿಗಳು, ಮುದ್ರಣ ಮಾಧ್ಯಮ ಹಾಗೂ ಕೇಬಲ್‌ ವಾಹಿನಿಗಳಲ್ಲಿ ಪ್ರಸಾರವಾಗುವ ಪ್ರತಿ ಕಾರ್ಯಕ್ರಮವನ್ನು ಪರಿಶೀಲಿಸಲಾಗುತ್ತದೆ. ಉಲ್ಲಂಘನೆ ಹಾಗೂ ಸಂಶಯಾಸ್ಪದ ಕಾಸಿಗಾಗಿ ಸುದ್ದಿಗಳು ಪ್ರಸಾರವಾದಲ್ಲಿ ಅವುಗಳನ್ನು ರೆಕಾರ್ಡ್‌ ಮಾಡಿ ಜಿಲ್ಲಾ ಚುನಾವಣಾ ಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.

ಮತದಾನಕ್ಕೆ ಇನ್ನೂ ನಾಲ್ಕು ದಿನಗಳ ಮುನ್ನ ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟ ಮಾಡುವುದಕ್ಕೆ ಸಂಬಂಧಿಸಿದಂತೆ ಅನುಮತಿ ಪಡೆಯುವುದು ಕಡ್ಡಾಯ. ವಿದ್ಯುನ್ಮಾನ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಸಾರ ಮಾಡುವುದಕ್ಕೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಲೇಬೇಕು. ಒಂದು ವೇಳೆ ನಿರ್ಲಕ್ಷಿಸಿ ಪ್ರಸಾರ ಮಾಡಿದರೇ ವಾಹಿನಿಗಳು ಹಾಗೂ ಸಂಬಂ ಸಿದ ಅಭ್ಯರ್ಥಿಗಳ ಮೇಲೆ ಚುನಾವಣಾ
ಧಿಕಾರಿಗಳು ಪ್ರಕರಣ ದಾಖಲಿಸಲಿದ್ದಾರೆ ಎಂದರು.

Advertisement

ಸ್ಥಳೀಯ ಕೇಬಲ್‌ ವಾಹಿನಿಗಳು ಚುನಾವಣಾ ಜಾಹೀರಾತು ಪ್ರಸಾರಕ್ಕೂ ಮುನ್ನ ರಾಜಕೀಯ ಪಕ್ಷಗಳು/ಅಭ್ಯರ್ಥಿಗಳು ಎಂಸಿಎಂಸಿ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡಿವೆ ಎಂಬುದನ್ನು ಖಾತ್ರಿಪಡಿಸಿಕೊಂಡು ಜಾಹೀರಾತು ಪ್ರಸಾರ ಮಾಡಬೇಕು. ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ದಲ್ಲಿ ಕೇಬಲ್‌ ವಾಹಿನಿಗಳ ಉಪಕರಣಗಳನ್ನು ಜಿಲ್ಲಾ ಚುನಾವಣಾಕಾರಿಗಳು ಜಪ್ತಿ ಮಾಡಿ ಕೇಸ್‌ ದಾಖಲಿಸಲಿದ್ದಾರೆ ಎಂದರು.

ಪತ್ರಿಕೆಗಳಲ್ಲಿ ಪ್ರಕಟವಾಗುವ ಚುನಾವಣೆಗೆ ಸಂಬಂಧಿಸಿದ ಜಾಹೀರಾತುಗಳನ್ನು ಗಮನಿಸಿ ಆ ಜಾಹೀರಾತಿಗೆ ತಗಲುವ ವೆಚ್ಚವನ್ನು ಜಾಹೀರಾತು ನೀಡಿದ ಪಕ್ಷ/ಅಭ್ಯರ್ಥಿಯ ವೆಚ್ಚದ ಖಾತೆಗೆ ಜಮಾ ಮಾಡಿ ಚುನಾವಣೆಯ ಖರ್ಚು-ವೆಚ್ಚ ಶಾಖೆಗೆ ಮಾಹಿತಿ ನೀಡಲಾಗುತ್ತದೆ. ಎಲ್ಲ ಪತ್ರಿಕೆಗಳ ವಾಣಿಜ್ಯ ಜಾಹೀರಾತು ದರ ಪಟ್ಟಿ ವಾರ್ತಾ ಇಲಾಖೆ ಬಳಿಯಿದ್ದು, ಅದರನ್ವಯ ಜಾಹೀರಾತು ದರವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಬಳಿಕ ಚುನಾವಣಾ ಸಂದರ್ಭದಲ್ಲಿ ನಮ್ಮ ಸಮಿತಿ ಸಿಬ್ಬಂದಿ ವಹಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿ ಸದಸ್ಯರಾದ ಸಣ್ಣ ಉಳಿತಾಯ ಹಾಗೂ ಆಸ್ತ ಋಣ ನಿರ್ವಹಣಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಆಹಾರ ಇಲಾಖೆಯ ಆಹಾರ ನಿರೀಕ್ಷಕ ರವಿಕುಮಾರ್‌ ರಾಥೋಡ್‌, ಸಣ್ಣ ಉಳಿತಾಯ ಇಲಾಖೆಯ ಅಭಿವೃದ್ಧಿ ಅ ಕಾರಿ ಸುಧೀಶ್‌, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್‌.ಎನ್‌.ಶಿವರಾಜ್‌, ವಾರ್ತಾ ಇಲಾಖೆಯ ಪ್ರ.ದ.ಸ ವಿ.ಸಿ.ಗುರುರಾಜ್‌ ಸೇರಿದಂತೆ ಎಂ.ಸಿ.ಎಂ.ಸಿ ತಂಡದ ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next