ಬಳ್ಳಾರಿ: ವಿಜಯನಗರ ಕ್ಷೇತ್ರದಲ್ಲಿ ಮತ್ತೂಮ್ಮೆ ಎದುರಾಗಿರುವ ಉಪಚುನಾವಣೆಗಾಗಿ ಪಕ್ಷಗಳಲ್ಲಿ ಕಸರತ್ತು ಶುರುವಾಗಿದ್ದು, ಟಿಕೆಟ್ ಯಾರಿಗೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಈ ಹಿಂದೆ ಜಿಲ್ಲೆಯಲ್ಲಿ ನಡೆದ ಎರಡು ಉಪಚುನಾವಣೆಗಳಲ್ಲಿ ಭರ್ಜರಿ ಜಯಗಳಿಸಿದ್ದ ಕಾಂಗ್ರೆಸ್, ಆನಂದ್‌ಸಿಂಗ್ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಈ ಕ್ಷೇತ್ರದಲ್ಲಿ ವಿಜಯ ಬಾವುಟ ಹಾರಿಸಲು ಉತ್ಸುಕವಾಗಿದೆ. ಹೀಗಾಗಿ ಕಾಂಗ್ರೆಸ್ “ಲಕ್ಶ್ಮೀ ಕಟಾಕ್ಷವುಳ್ಳ’ ಬಲಿಷ್ಠ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿದೆ ಎನ್ನಲಾಗುತ್ತಿದೆ.
Advertisement
ಈ ಕ್ಷೇತ್ರದಲ್ಲಿ ಅನರ್ಹ ಶಾಸಕ ಬಿ.ಎಸ್.ಆನಂದ್‌ಸಿಂಗ್ ಅವರು ರಾಜಕೀಯವಾಗಿ ತಮ್ಮ ಛಾಪು ಮೂಡಿಸಿದ್ದಾರೆ. ಅಲ್ಲದೇ ವೈಯಕ್ತಿಕ ವರ್ಚಸ್ಸು ಬೆಳೆಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ಮೂರು ಬಾರಿ ಯಾರೂ ಗೆಲ್ಲದ ಈ ಕ್ಷೇತ್ರದಲ್ಲಿ 2008, 2013 ಹಾಗೂ 2018ರಲ್ಲಿ ಸತತವಾಗಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿಂಗ್ ಮೇಲೆ ಕ್ಷೇತ್ರದ ಮತದಾರರಲ್ಲಿ ಒಂದಷ್ಟು ಅಸಮಾಧಾನವಿದ್ದರೂ, ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿ ಅವೆಲ್ಲವೂ ಅಳಿಸಿ ಹೋಗಿದ್ದು, ವರ್ಚಸ್ಸು ಮತ್ತಷ್ಟು ಹೆಚ್ಚಿದೆ.
Related Articles
Advertisement
ರೆಡ್ಡಿಗೂ ಉಂಟು ಲಿಂಕ್: ಇನ್ನು ಕಾಂಗ್ರೆಸ್‌ನ ಮತ್ತೂಬ್ಬ ಪ್ರಭಾವಿ ಮುಖಂಡ ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ಅವರ ಹೆಸರು ಸಹ ಜೋರಾಗಿ ಕೇಳಿಬರುತ್ತಿದೆ. ಇವರಿಗೆ ಹೊಸಪೇಟೆಯೊಂದಿಗೆ ಉತ್ತಮ ನಂಟಿದೆ. ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ವಿಚಾರವಾಗಿ ಅನರ್ಹ ಶಾಸಕ ಆನಂದ್‌ಸಿಂಗ್‌ಗೆ ಬೆಂಬಲ ಸೂಚಿಸಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಸೂರ್ಯ ನಾರಾಯಣರೆಡ್ಡಿ ಆಪ್ತರಲ್ಲಿ ಒಬ್ಬರು. ಅಲ್ಲದೇ ಆರ್ಥಿಕವಾಗಿಯೂ ಸದೃಢರಾಗಿದ್ದಾರೆ. ಇವರನ್ನು ಕಣಕ್ಕಿಳಿಸಿದರೆ ತೀವ್ರ ಪೈಪೋಟಿ ನೀಡಲು ಸಾಧ್ಯ ಎಂಬ ಚರ್ಚೆಯೂ ನಡೆದಿದೆ. ಈ ಮಧ್ಯೆ ಕಾಂಗ್ರೆಸ್ ಟಿಕೆಟ್‌ಗಾಗಿ ಮುಖಂಡರಾದ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಮಾಜಿ ಶಾಸಕ ಸಿರಾಜ್ ಶೇಖ್ ಸಹ ತೆರೆಮರೆಯ ಪ್ರಯತ್ನದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಆನಂದಸಿಂಗ್‌ರ ಆನಂದ ಕಸಿಯುವ ನಿಟ್ಟಿನಲ್ಲಿ ಕಾಂಗ್ರೆಸ್ರಾಜಕೀಯ ತಂತ್ರಗಾರಿಕೆ ರೂಪಿಸುತ್ತಿದ್ದು ಪ್ರಬಲ ಪೈಪೋಟಿ
ನೀಡಲು ಸಜ್ಜಾಗುತ್ತಿದೆ.