Advertisement

ಸಿಇಟಿ ಪರೀಕ್ಷೆ: ಬಳ್ಳಾರಿಯ 6 ಜನ‌ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

01:47 PM Jul 30, 2020 | keerthan |

ಬಳ್ಳಾರಿ:  ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಯುವ ಸಿಇಟಿ ಪರೀಕ್ಷೆಗಳು ಗುರುವಾರದಿಂದ‌ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದ್ದು, ಕೋವಿಡ್ ಸೋಂಕಿತ ಜಿಲ್ಲೆಯ ವಿದ್ಯಾರ್ಥಿಗಳಿಗೆ ನಗರದ ವಿಮ್ಸ್ ದಂತ ಮಹಾವಿದ್ಯಾಲಯದಲ್ಲಿ ಅಗತ್ಯ ಸಿದ್ಧತೆಯೊಂದಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

Advertisement

ಸಿಇಟಿ ಪರೀಕ್ಷೆಗೆ ಬರೆಯಲು ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಕೋವಿಡ್-19 ವೈರಸ್ ಪಾಸಿಟಿವ್ ದೃಢಪಟ್ಟಂತಹ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಬರೆಯಲು ಬಳ್ಳಾರಿಯ ಸರ್ಕಾರಿ ದಂತ ಮಹಾವಿದ್ಯಾಲಯದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನಿರ್ದೇಶನದ‌ ಮೇರೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಈ ವ್ಯವಸ್ಥೆ ಮಾಡಿದೆ.

ಬಳ್ಳಾರಿ, ಸಿರಗುಪ್ಲ ಹಾಗೂ ಹಡಗಲಿಯ ತಲಾ‌‌ ಇಬ್ಬರು ಸೇರಿ ಕೋವಿಡ್ ಸೋಂಕಿತ ಒಟ್ಟು 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಜಿಲ್ಲಾಡಳಿತವು ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ‌ಕರೆತಂದು ಅತ್ಯಂತ ಸುರಕ್ಷಿತವಾಗಿ ಅವರಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next