Advertisement
ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂಗವಿಕಲರು ತಾವು ಅಂದುಕೊಂಡಿರುವ ಗುರಿಯನ್ನು ಛಲದಿಂದ ಸಾಧಿಸಬೇಕು. ನಿಮ್ಮ ಸಾಧನೆ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದ ಅವರು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
Related Articles
Advertisement
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್. ಮಲ್ಲೂರ್ ಮಾತನಾಡಿ, ಸರ್ಕಾರವು ವಿಕಲಚೇತನರಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗಣ್ಯರಿಂದ ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನಿಸಲಾಯಿತು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿ ಕಾರಿ ಕೆ. ಮಹಾಂತೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಉಷಾ. ಎಸ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಎಚ್.ಎಂ. ಅಂಕಲಯ್ಯ ಸೇರಿದಂತೆ ಗೋಪಾಲಕೃಷ್ಣ, ಉಮಾಪತಿ ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.