Advertisement

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

05:45 PM May 08, 2024 | Team Udayavani |

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರ ಬುಧವಾರ ಸಂಜೆ ಸುಮಾರು 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next