Advertisement
ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಸಮೀಪ ಗೋಡೌನ್ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಮತ್ತು ಆಹಾರ ನಿರೀಕ್ಷಕ ವಿಶ್ವ.ಕೆ ಹಾಗೂ ಸಿಬಂದಿಗಳು ಇಂದು ಮಧ್ಯಾಹ್ನ ದಾಳಿ ಮಾಡಿದ್ದಾರೆ. ದಾಳಿ ವೇಳೆ ಗೋಡೌನ್ ನಲ್ಲಿ 14.5 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು ಅಶೋಕ್ ಲೆಲೈಂಡ್ ಗೂಡ್ಸ್ ವಾಹನದಲ್ಲಿ ತುಂಬಿಸಿಟ್ಟ 23 ಕ್ವಿಂಟಾಲ್ ಅಕ್ಕಿ, ತೂಕದ ಯಂತ್ರ ಪತ್ತೆಯಾಗಿದ್ದು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗೂಡ್ಸ್ ವಾಹನ ಚಾಲಕ ಹಾಗೂ ಮಾಲಕ ಹಾಸನ ಜಿಲ್ಲೆಯ ಲಕ್ಷ್ಮೀಪೂರ ನಿವಾಸಿ ನಂದೀಶ್ (24) ಬಂಧಿಸಲಾಗಿದೆ.
Related Articles
Advertisement