Advertisement
ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಅವರು ಅಪಘಾತದ ಬಳಿಕ ಸೊಂಟದ ಸ್ವಾಧೀನ ಕಳೆದುಕೊಂಡು ಮಲಗಿದ್ದಲ್ಲೇ 14 ವರ್ಷ ನರಕಯಾತನೆ ಅನುಭವಿಸಿದ್ದರು. ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.
2010ರ ಜುಲೈ 30ರಂದು ಭಾರೀ ಮಳೆ ಸುರಿಯುತ್ತಿದ್ದ ವೇಳೆ ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯರಾದ ಭಾರತಿ ಹಾಗೂ ಜಯಮಾಲಾ ಕಾಲೇಜು ಬಿಟ್ಟು ಆಟೋದಲ್ಲಿ ಬರುತ್ತಿದ್ದ ಸಂದರ್ಭ ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ ಢಿಕ್ಕಿಯಾಗಿತ್ತು. ಈ ವೇಳೆ ಶಿಕ್ಷಕಿ ಜಯಮಾಲಾ ಸ್ಥಳದಲ್ಲೇ ಮೃತಪಟ್ಟಿದ್ದು ಭಾರತಿ ಗಂಭೀರವಾಗಿ ಗಾಯಗೊಂಡಿದ್ದರು. ಜಯಮಾಲಾ ಅವರು ಕೆ.ಎ.ಎಸ್. ಪರೀಕ್ಷೆ ಬರೆದಿದ್ದು ಮರಣೋತ್ತರವಾಗಿ ಬಂದ ಫಲಿತಾಂಶದಲ್ಲಿ ಉತ್ತೀರ್ಣರಾಗಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆಲವು ಸಮಯ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆದು ಬಳಿಕ ಮನೆಗೆ ಬಂದಿದ್ದ ಶಿಕ್ಷಕಿ ಭಾರತಿ ಅವರು ಸೊಂಟದ ಸ್ವಾಧೀನ ಕಳೆದುಕೊಂಡ ಪರಿಣಾಮ ಮಲಗಿದ್ದಲ್ಲೆ ಇದ್ದರು. 14 ವರ್ಷ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಂದ ಎಲ್ಲ ನೋವು, ಸವಾಲುಗಳನ್ನು ಎದುರಿಸಿದ್ದರು. ಕಾಲೇಜು ವಿದ್ಯಾರ್ಥಿಗಳ ಜತೆ ಸಂಪರ್ಕದಲ್ಲಿದ್ದು ಅವರಿಗೆ ಅಕೌಂಟೆನ್ಸಿ, ಬ್ಯುಸಿನೆಸ್ ಸ್ಟಡಿ ಹೀಗೇ ಏನೇ ವಿಷಯಗಳಿದ್ದರೂ ಮೊಬೈಲ್ ಮೂಲಕವೇ ಪಾಠ ಹೇಳಿಕೊಡುತ್ತಿದ್ದರು.
Related Articles
Advertisement