Advertisement
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ (48) ಎಂಬಾತನು ರಾಜೇಶ್ ಎಂ.ಕೆ. ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಯತ್ನಕ್ಕೆ ಸಂಬಂಧಿಸಿ ಜೂ. 5ರಂದು ಆರೋಪಿ ಕುಶಾಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗಲಾಟೆ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂಪೋಕ್ಸೋ ಅಡಿಯಲ್ಲಿ ಜೂ. 5ರಂದು ರಾಜೇಶ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.